ಪಾಕ್ ಶೆಲ್ ದಾಳಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಹಿರಿಯ ಅಧಿಕಾರಿ ಸಾವು, ಸಿಎಂ ಒಮರ್ ಅಬ್ದುಲ್ಲಾ ಸಂತಾಪ

Share with



ಪಾಕಿಸ್ತಾನದ ವರ್ತನೆ ಮಿತಿಮೀರಿದೆ, ಭಾರತವನ್ನು ಪದೇ ಪದೇ ಕೆಣಕುತ್ತಿದೆ. ಈಗಾಗಲೇ ಆಪರೇಷನ್ ಸಿಂದೂರ್ ಮೂಲಕ ಉತ್ತರ ನೀಡಿದ್ರು, ಪಾಕ್ ಬುದ್ಧಿ ಕಲಿಯುತ್ತಿಲ್ಲ. ಮತ್ತೆ ಪಾಕ್ ಜಮ್ಮು-ಕಾಶ್ಮೀರದ ಮೇಲೆ ದಾಳಿ ನಡೆಸಿದೆ. ಜಮ್ಮು-ಕಾಶ್ಮೀರದ ರಾಜೌರಿ ಜಿಲ್ಲೆಯ ವಸತಿ ಕಟ್ಟಡದ ಮೇಲೆ ಶನಿವಾರ ಮುಂಜಾನೆ ಶೆಲ್ ದಾಳಿಯನ್ನು ನಡೆಸಿದೆ. ಈ ದಾಳಿಯಲ್ಲಿ ಒಬ್ಬ ಉನ್ನತ ಮಟ್ಟದ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ.
ಪಾಕ್ ಶೆಲ್ ದಾಳಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಹಿರಿಯ ಅಧಿಕಾರಿ ಸಾವು, ಸಿಎಂ ಒಮರ್ ಅಬ್ದುಲ್ಲಾ ಸಂತಾಪ

ಭಾರತ ಮತ್ತು ಪಾಕಿಸ್ತಾನದಲ್ಲಿ ಯುದ್ಧದ ಕಾರ್ಮೋಡ ಸೃಷ್ಟಿಯಾಗಿದೆ. ಪಾಕ್ ದಾಳಿಗೆ ಭಾರತ ಪ್ರತಿದಾಳಿಯನ್ನು ನಡೆಸುತ್ತಿದೆ. ಈಗಾಗಲೇ ಆಪರೇಷನ್ ಸಿಂದೂರ್ದ ಮೂಲಕ ಪಾಕ್ ಉಗ್ರರಿಗೆ ಭಾರತದ ನಾಗರಿಕರನ್ನು ಹತ್ಯೆ ಮಾಡಿದ್ದಕ್ಕೆ ಭಾರತದ ಸೇನೆ ಸರಿಯಾದ ಉತ್ತರ ನೀಡಿದ್ದಾರೆ. ಇಷ್ಟಾದರು ಪಾಕ್ ಬುದ್ಧಿ ಕಲಿತ್ತಿಲ್ಲ. ಮತ್ತೆ ಪಾಕ್ ಜಮ್ಮು-ಕಾಶ್ಮೀರದ (Jammu and Kashmir) ಮೇಲೆ ದಾಳಿ ನಡೆಸಿದೆ. ಜಮ್ಮು-ಕಾಶ್ಮೀರದ ರಾಜೌರಿ ಜಿಲ್ಲೆಯ ವಸತಿ ಕಟ್ಟಡದ ಮೇಲೆ ಶನಿವಾರ ಮುಂಜಾನೆ ಶೆಲ್ ದಾಳಿಯನ್ನು ನಡೆಸಿದೆ. ಈ ದಾಳಿಯಲ್ಲಿ ಒಬ್ಬ ಉನ್ನತ ಮಟ್ಟದ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ. ರಾಜೌರಿ ಪಟ್ಟಣದಲ್ಲಿರುವ ಹೆಚ್ಚುವರಿ ಉಪ ಆಯುಕ್ತ (ರಾಜೌರಿ) ರಾಜ್ ಕುಮಾರ್ ಥಾಪಾ ಅವರ ಅಧಿಕೃತ ನಿವಾಸಕ್ಕೆ ಫಿರಂಗಿ ಶೆಲ್ ದಾಳಿ ನಡೆಸಲಾಗಿದೆ. ಈ ದಾಳಿಯಲ್ಲಿ ಅವರ ಜತೆಗಿದ್ದ ಇಬ್ಬರು ಸಿಬ್ಬಂದಿಗಳಿಗೂ ಗಾಯಗಳಿವೆ. ರಾಜ್ ಕುಮಾರ್ ಥಾಪಾ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇನ್ನು ಗಾಯಗೊಂಡಿರುವ ಇಬ್ಬರು ಸಿಬ್ಬಂದಿಗಳ ಸ್ಥಿತಿ ಗಂಭೀರವಾಗಿದೆ. ಇದೀಗ ಈ ಹಿರಿಯ ಅಧಿಕಾರಿಯ ಸಾವಿಗೆ ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ (CM Omar Abdullah) ಸಂತಾಪ ಸೂಚಿಸಿದ್ದಾರೆ.

ಇಂದು ಮುಂಜಾನೆ ಪಾಕ್ ಜಮ್ಮುನ ರಾಜೌರಿ ಪಟ್ಟಣದಲ್ಲಿರುವ ಹೆಚ್ಚುವರಿ ಉಪ ಆಯುಕ್ತರ ಮನೆ ಮೇಲೆ ದಾಳಿಯನ್ನು ನಡೆಸಿದ್ದಾರೆ. ನೆರವಾಗಿ ಶೆಲ್ ಅವರ ಮನೆಯ ಮೇಲೆ ಅಪ್ಪಳಿಸಿದೆ. ಇದರಿಂದ ಅವರಿಗೆ ಗಂಭೀರ ಗಾಯಗಳಾಗಿದ್ದು ಸಾವನ್ನಪ್ಪಿದ್ದಾರೆ. ದಾಳಿಯ ನಂತರ ಉಪ ಆಯುಕ್ತ (ರಾಜೌರಿ) ರಾಜ್ ಕುಮಾರ್ ಥಾಪಾ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಅವರಿಗೆ ಬೇಕಾದ ಎಲ್ಲ ಚಿಕಿತ್ಸೆಯನ್ನು ನೀಡಲಾಗಿದೆ. ವೈದ್ಯರು ಅವರನ್ನು ಉಳಿಸಲು ಎಲ್ಲ ರೀತಿಯ ಪ್ರಯತ್ನವನ್ನು ಮಾಡಿದ್ರು ಅವರು ಸಾವನ್ನಪ್ಪಿದ್ದಾರೆ ಎಂದು ಜಮ್ಮು-ಕಾಶ್ಮೀರದ ಅಧಿಕಾರಿಗಳು ಹೇಳಿದ್ದಾರೆ.


ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಸಂತಾಪ:
ಇದೊಂದು ಆಘಾತಕಾರಿ ಸುದ್ದಿ, ನೆನ್ನೆಯಷ್ಟೇ ನಾನು ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತೆಯ ಬಗ್ಗೆ ಚರ್ಚೆಯನ್ನು ನಡೆಸಿದ್ದೆ. ಜಿಲ್ಲೆಯಾದ್ಯಂತ ಉಪ ಮುಖ್ಯಮಂತ್ರಿಯೊಂದಿಗೆ ಅವರು ಕೂಡ ಅಲ್ಲಿದ್ದರು. ನನ್ನ ಅಧ್ಯಕ್ಷತೆಯಲ್ಲಿ ಆನ್ಲೈನ್ ಚರ್ಚೆಗಳನ್ನು ಕೂಡ ನಡೆಸಲಾಗಿತ್ತು. ಈ ಚರ್ಚೆಯಲ್ಲಿ ಅವರು ಕೂಡ ಭಾಗವಹಿಸಿದರು. ಆದರೆ ಇಂದು ಬೆಳಿಗ್ಗೆ  ಪಾಕ್ ರಾಜೌರಿ ಪಟ್ಟಣವನ್ನು ಗುರಿಯಾಗಿಸಿಕೊಂಡು ನಮ್ಮ ಹೆಚ್ಚುವರಿ ಜಿಲ್ಲಾ ಅಭಿವೃದ್ಧಿ ಆಯುಕ್ತ ಶ್ರೀ ರಾಜ್ ಕುಮಾರ್ ಥಾಪ್ಪಾ ಅವರ ಮನೆಯ ಮೇಲೆ ಶೆಲ್ ದಾಳಿಯನ್ನು ನಡೆಸಿದ್ದಾರೆ. ಈ ದಾಳಿಯಲ್ಲಿ ಅವರು ಸಾವನ್ನಪ್ಪಿದ್ದಾರೆ. ಈ ಭೀಕರ  ಆಘಾತದ ಬಗ್ಗೆ ಮತ್ತು ದುಃಖವನ್ನು ವ್ಯಕ್ತಪಡಿಸಲು ನನಗೆ ಪದಗಳಿಲ್ಲ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಎಕ್ಸ್ನಲ್ಲಿ ಟ್ವೀಟ್ ಮಾಡಿದ್ದಾರೆ.



Share with

Leave a Reply

Your email address will not be published. Required fields are marked *