ಜಮ್ಮು- ಕಾಶ್ಮೀರ: ಉಗ್ರರು ಉಡೀಸ್‌

Share with

ಜಮ್ಮು ಮತ್ತು ಕಾಶ್ಮೀರದ ರಚೌರಿಯ ನೌಶೇರಾ ಸೆಕ್ಟರ್‌ನಲ್ಲಿ ಸೇನೆ ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ವರದಿಯಾಗಿದೆ.

ಗುಂಡಿನ ದಾಳಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಜೊತೆಗೆ ಇವರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಭಯೋತ್ಪಾದಕರು ಗಡಿ ನಿಯಂತ್ರಣ ರೇಖೆಯಿಂದ ಒಳನುಸುಳಲು ಯತ್ನಿಸುತ್ತಿದ್ದರು ಎಂದು ಮೂಲಗಳನ್ನು ಉಲ್ಲೇಖಿಸಿ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.


Share with