ನಾನು CM ಆಗದೇ ಇರಬಹುದು. ಆದರೆ ರಾಜಕೀಯದಲ್ಲಿ HD ಕುಮಾರಸ್ವಾಮಿಗಿಂತ ಹೆಚ್ಚಿನ ಅನುಭವ ಇದೆ. ಅವರಿಂದ ಕಲಿಯುವ ಅಗತ್ಯ ನನಗಿಲ್ಲ ಎಂದು DCM DK ಶಿವಕುಮಾರ್ ಹೇಳಿದ್ದಾರೆ.

KPCC ಕಚೇರಿಯಲ್ಲಿ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ JDS ಮುಖಂಡ ಗೋವಿಂದರಾಜ್ ಅವರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಈ ವೇಳೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರ ಧೋರಣೆ ನೋಡುತ್ತಿದ್ದರೆ, ಸದ್ಯದಲ್ಲೇ JDS ಪಕ್ಷ BJP ಜೊತೆ ವಿಲೀನವಾಗುವ ಸಾಧ್ಯತೆ ಇದೆ ಎಂದು ಭವಿಷ್ಯ ನುಡಿದಿದ್ದಾರೆ.




