ಉಡುಪಿ: ಕಾಪು ಮಂಡಲದ ಬಿಜೆಪಿ ಅಧ್ಯಕ್ಷರಾಗಿ ಜಿತೇಂದ್ರ ಶೆಟ್ಟಿ ಅಧಿಕಾರ ಸ್ವೀಕಾರ

Share with

ಉಡುಪಿ: ಬಿಜೆಪಿ ಕಾಪು ಮಂಡಲ ಇದರ ಅಧ್ಯಕ್ಷರ ಅಧಿಕಾರ ಹಸ್ತಾಂತರ ಕಾರ್ಯಕ್ರಮ ಫೆ.28ರಂದು ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ನಡೆಯಿತು.

ಬಿಜೆಪಿ ಕಾಪು ಮಂಡಲ ಇದರ ಅಧ್ಯಕ್ಷರ ಅಧಿಕಾರ ಹಸ್ತಾಂತರ ಕಾರ್ಯಕ್ರಮ ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ನಡೆಯಿತು.

ನಿಕಟಪೂರ್ವ ಮಂಡಲ ಅಧ್ಯಕ್ಷ ಶ್ರೀಕಾಂತ್ ನಾಯಕ್ ಅವರು ನೂತನ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ ಅವರಿಗೆ ಪಕ್ಷದ ಬಾವುಟವನ್ನು ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ ಸುವರ್ಣ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಸಂಚಾಲಕರಾದ ಕುತ್ಯಾರು ನವೀನ್ ಶೆಟ್ಟಿ, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್ ಹಾಗೂ ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.


Share with

Leave a Reply

Your email address will not be published. Required fields are marked *