ಪ್ರಜ್ವಲ್ ರೇವಣ್ಣಗೆ ಕೋರ್ಟ್ ಮತ್ತೆ ಆಘಾತವನ್ನು ನೀಡಿದೆ. KR ನಗರ ಮಹಿಳೆಯ ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿ, ಕಳೆದ 14 ತಿಂಗಳಿನಿಂದ ಜೈಲಿನಲ್ಲಿ ಇರುವ ಪ್ರಜ್ವಲ್ ರೇವಣ್ಣರ ಜಾಮೀನು ಅರ್ಜಿಯ ತೀರ್ಪನ್ನು ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಇಂದು ಪ್ರಕಟಿಸಬೇಕಿತ್ತು.

ಆದರೆ, ಇದೀಗ ಕೋರ್ಟ್ ಈ ತೀರ್ಪನ್ನು ಆಗಸ್ಟ್ 1ಕ್ಕೆ ಮುಂದೂಡಿದೆ. 26 ಸಾಕ್ಷಿಗಳ ವಿಚಾರಣೆ ನಡೆಸಿರುವ ಕೋರ್ಟ್, ಈ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿಯೋ ಅಥವಾ ಅಲ್ಲವೋ ಎಂದು ಆ. 1ಕ್ಕೆ ತೀರ್ಪು ನೀಡಲಿದೆ.




