ಕಾಸರಗೋಡು: ಇಲ್ಲಿನ ಜಿಲ್ಲಾ ಉದ್ಯೋಗ ವಿನಿಮಯ ಮತ್ತು ಉದ್ಯೋಗ ಕೇಂದ್ರವು ಜು.15ರಂದು ಮಂಜೇಶ್ವರದ ಗೋವಿಂದ ಪೈ ಸ್ಮಾರಕ ಸರ್ಕಾರಿ ಕಾಲೇಜಿನಲ್ಲಿ ಉಚಿತ ಉದ್ಯೋಗ ಮೇಳವನ್ನು ಆಯೋಜಿಸಿದೆ.
40 ಕ್ಕೂ ಹೆಚ್ಚು ಉದ್ಯೋಗದಾತರು ಭಾಗವಹಿಸುವ ಉದ್ಯೋಗ ಮೇಳದಲ್ಲಿ ಖಾಸಗಿ ಸಂಸ್ಥೆಗಳಿಂದ 2000 ಕ್ಕೂ ಹೆಚ್ಚು ಖಾಲಿ ಹುದ್ದೆಗಳನ್ನು ವರದಿ ಮಾಡಲಾಗಿದೆ. ಭಾಗವಹಿಸಲು ಆಸಕ್ತಿಯುಳ್ಳ ಅಭ್ಯರ್ಥಿಗಳು ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸರಕಾರಿ ಕಾಲೇಜಿನಲ್ಲಿ ಎಲ್ಲಾ ಪ್ರಮಾಣಪತ್ರಗಳು ಮತ್ತು ಸ್ವವಿವರಗಳೊಂದಿಗೆ ಜು.15ರಂದು ಬೆಳಗ್ಗೆ 9.30ಕ್ಕೆ ಹಾಜರಿರಬೇಕೆಂದು ಅಧಿಕಾರಿಗಳು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.