ಜೂನ್ 9 : ವಿಟ್ಲದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ 133ನೇ ಜನ್ಮದಿನಾಚರಣೆ

Share with

ವಿಟ್ಲ: ದ.ಕ ಜಿಲ್ಲಾ ದಲಿತ್ ಸೇವಾ ಸಮಿತಿ ವತಿಯಿಂದ 17ನೇ ವರ್ಷದ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ 133ನೇ ಜನ್ಮದಿನಾಚರಣೆ ಕಾರ್ಯಕ್ರಮ ಜೂನ್ 9 ರಂದು ವಿಟ್ಲ ಸರಕಾರಿ ಮಾದರಿ ಶಾಲಾ ಶತಮಾನೋತ್ಸವ ಕಟ್ಟಡದಲ್ಲಿ ನಡೆಯಲಿದೆ ಎಂದು ದಲಿತ್ ಸೇವಾ ಸಮಿತಿಯ ಬಿ.ಕೆ ಸೇಸಪ್ಪ ಬೆದ್ರಕಾಡು ತಿಳಿಸಿದರು.

ವಿಟ್ಲದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಕಾರ್ಯಕ್ರಮದಲ್ಲಿ ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ, ಬಹುಮಾನ ವಿತರಣೆ, ಸಾಂಸ್ಕೃತಿಕ ಕಾರ್ಯಕ್ರಮ, ಹಮ್ಮಿಕೊಳ್ಳಲಾಗಿದೆ ಎಂದರು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅಂಬೇಡ್ಕರ್ ಬಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಿದ್ದು, ಮಾಜಿ ಬಿ ರಮಾನಾಥ ರೈ ಉದ್ಘಾಟಿಸಲಿದ್ದಾರೆ. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಶಾಸಕ ಸಂಜೀವ ಮಠಂದೂರು ಮೊದಲಾದವರು ಭಾಗವಹಿಸಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕಾರ್ಯಾಧ್ಯಕ್ಷ ಚಂದ್ರಶೇಖರ ಯು, ಜಿಲ್ಲಾ ಉಪಾಧ್ಯಕ್ಷ ಪ್ರಸಾದ್ ಬೊಳ್ಮಾರ್ ಉಪಸ್ಥಿತರಿದ್ದರು.


Share with

Leave a Reply

Your email address will not be published. Required fields are marked *