ಕುಸಿದುಬಿದ್ದ ನ್ಯಾ, ಸಂತೋಷ್ ಹೆಗ್ಡೆ..ಆಸ್ಪತ್ರೆಗೆ ದಾಖಲು!

Share with

ಮಾಜಿ ಲೋಕಾಯುಕ್ತ, ನಿವೃತ್ತ ನ್ಯಾ ಎನ್. ಸಂತೋಷ್‌ ಹೆಗ್ಡೆ ಅವರನ್ನು ದಿಢೀರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನ ಕಾರ್ಯಕ್ರಮವೊಂದರಲ್ಲಿ ಮುಖ್ಯ ಅತಿಥಿಯಾಗಿ ಭಾಷಣ ಮಾಡುತ್ತಿದ್ದ ವೇಳೆ, ಅಸ್ವಸ್ಥಗೊಂಡು ವೇದಿಕೆಯಲ್ಲೇ ಕುಸಿದುಬಿದ್ದಿದ್ದಾರೆ.

ತಕ್ಷಣವೇ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ಇದರಿಂದ ಕಾರ್ಯಕ್ರಮದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ನಗರದ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಘಟನೆ ನಡೆದಿದೆ.


Share with

Leave a Reply

Your email address will not be published. Required fields are marked *