ಢಾಕಾದಲ್ಲಿ ನಡೆದ ಮಹಿಳಾ ಕಬಡ್ಡಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಚಿನ್ನ ಗೆದ್ದ ಭಾರತ ತಂಡದ ರಾಜ್ಯದ ಆಟಗಾರ್ತಿ ಧನಲಕ್ಷ್ಮಿ ಅವರನ್ನು CM ಸಿದ್ದರಾಮಯ್ಯ ಅಭಿನಂದಿಸಿ, ಸನ್ಮಾನಿಸಿದ್ದಾರೆ.

ಇದೇ ವೇಳೆ ಮುಖ್ಯಮಂತ್ರಿಗಳು, ಚೈನಾದಲ್ಲಿ ನಡೆದ ಕಿರಿಯರ ಏಷ್ಯನ್ ಬ್ಯಾಡ್ಮಿಂಟನ್ ಸಿಂಗಲ್ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಗೆದ್ದ ಲಕ್ಷ್ಯ ರಾಜೇಶ್’ರನ್ನು ಸಹ ಅಭಿನಂದಿಸಿದ್ದಾರೆ. ಅಲ್ಲದೆ ಈ ಇಬ್ಬರಿಗೂ ಸರ್ಕಾರದ ವತಿಯಿಂದ ತಲಾ 5 ಲಕ್ಷ ರೂಪಾಯಿ ಪ್ರೋತ್ಸಾಹಧನ ನೀಡುವುದಾಗಿ CM ತಿಳಿಸಿದ್ದಾರೆ.




