ಕಡಬ: ಕಡಬದ ಬಿಳಿನೆಲೆ ಎಂಬಲ್ಲಿ ಬೈಕ್ ಗೆ ಬಸ್ ಡಿಕ್ಕಿ ಹೊಡೆದರ ಪರಿಣಾಮವಾಗಿ ಗಂಭೀರ ಗಾಯಗೊಂಡ ಬೈಕ್ ಸವಾರ ಮೃತಪಟ್ಟ ಘಟನೆ ಫೆ.19ರಂದು ನಡೆದಿದೆ.
ಮೃತಪಟ್ಟ ಬೈಕ್ ಸವಾರನನ್ನು ಕೊಂಬಾರು ಮಣಿಭಾಂಡ ತೇರೆಬೀದಿ ನಿವಾಸಿ ನೆಟ್ಟಣದಲ್ಲಿ ಮೆಕ್ಯಾನಿಕ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ವಾಸುದೇವ ಗೌಡ ಎಂದು ಗುರುತಿಸಲಾಗಿದೆ.
ಕೆ.ಎಸ್.ಅರ್.ಟಿ.ಸಿ ಬಸ್ ಓವರ್ ಟೇಕ್ ಮಾಡುವ ಭರದಲ್ಲಿ ಎದುರಿನಿಂದ ಬಂದ ಬೈಕ್ ಗೆ ಢಿಕ್ಕಿ ಹೊಡೆದರ ಪರಿಣಾಮವಾಗಿ ಗಂಭೀರ ಗಾಯಗೊಂಡ ವಾಸುದೇವ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಕಡಬ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣವನ್ನು ದಾಖಲಿಸಿದ್ದಾರೆ.