ಕಡಬ: ಕಾಲೇಜು ಆವರಣದಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಅಪರಿಚಿತ ವ್ಯಕ್ತಿಯಿಂದ ಆ್ಯಸಿಡ್ ದಾಳಿಯಾಗಿರುವ ಘಟನೆ ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಾ.4ರಂದು ನಡೆದಿದೆ.
ಘಟನೆಯಲ್ಲಿ ಮೂವರು ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆರೋಪಿ ಅಬೀನ್ ನನ್ನು ಪೊಲೀಸ್ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.