ಕಡಬ: ಕಾಲೇಜು ಆವರಣದಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಅಪರಿಚಿತ ವ್ಯಕ್ತಿಯಿಂದ ಆ್ಯಸಿಡ್ ದಾಳಿಯಾಗಿರುವ ಘಟನೆ ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಾ.4ರಂದು ನಡೆದಿದೆ.
![ಕಾಲೇಜು ಆವರಣದಲ್ಲಿ ಆ್ಯಸಿಡ್ ದಾಳಿ](https://i0.wp.com/veekshakavani.com/wp-content/uploads/2024/03/ಕಾಲೇಜು-ಆವರಣ.jpg?resize=640%2C400&ssl=1)
ಘಟನೆಯಲ್ಲಿ ಮೂವರು ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆರೋಪಿ ಅಬೀನ್ ನನ್ನು ಪೊಲೀಸ್ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.