ಕಡಬ: ಇದೇ ಮೊದಲ ಬಾರಿಗೆ ನಡೆದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಪಟ್ಟಣ ಪಂಚಾಯತ್ ಚುನಾವಣೆಯ ಫಲಿತಾಂಶ ಇದೀಗ ಪ್ರಕಟಗೊಂಡಿದೆ. ಒಟ್ಟು 13 ಸ್ಥಾನಗಳಿಗೆ ನಡೆದಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 8 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಬಹುಮತ ಗಳಿಸಿದೆ.

ಉಳಿದ ಐದು ಸ್ಥಾನಗಳಲ್ಲಿ ಬಿಜೆಪಿ ಗೆಲುವು ದಾಖಲಿಸಿದೆ. ಎಸ್‌ಡಿಪಿಐ ಪಕ್ಷ ಶೂನ್ಯ ಸಾಧಿಸಿದೆ. ಇಂದು ಬೆಳಗ್ಗೆ 8 ಗಂಟೆಗೆ ಆರಂಭಗೊಂಡ ಮತ ಎಣಿಕೆ ಪ್ರಕ್ರಿಯೆ ಕ್ಷಿಪ್ರವಾಗಿ ನಡೆದಿದ್ದು, ಸದ್ಯ ವಿಜೇತರ ಘೋಷಣೆಯಾಗಿದೆ.




