ಕಾಪು: ಕಾರು ಡಿಕ್ಕಿ; ಪಾದಚಾರಿ ಸಾವು

Share with

ಕಾಪು: ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕಟಪಾಡಿಯ ಭಾಗ್ಯಲಕ್ಷ್ಮೀ ಗ್ರಾನೈಟ್ಸ್ ಎದುರು ರಾಷ್ಟ್ರೀಯ ಹೆದ್ದಾರಿ-66ರಲ್ಲಿ ನ.14ರಂದು ನಡೆದಿದೆ ಎಂದು ವರದಿಯಾಗಿದೆ.

ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತ್ಯು.

ಮೃತಪಟ್ಟ ವ್ಯಕ್ತಿಯನ್ನು ಇನ್ನಂಜೆಯ ಉತ್ತಮ (33) ಎಂದು ಗುರುತಿಸಲಾಗಿದೆ. ಪೇಟಿಂಗ್ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಇವರು, ರಸ್ತೆಯನ್ನು ದಾಟಲು ರಸ್ತೆ ಬದಿ ನಿಂತುಕೊಂಡಿದ್ದರು. ಈ ವೇಳೆ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಕಾರೊಂದು ಇವರಿಗೆ ಡಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಿತ್ತು ಎನ್ನಲಾಗಿದ್ದು, ಇದರಿಂದ ಗಂಭೀರ ಗಾಯಗೊಂಡಿದ್ದ ಉತ್ತಮ ಅವರನ್ನು ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದು ಬಂದಿದೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Share with

Leave a Reply

Your email address will not be published. Required fields are marked *