ಉಡುಪಿ: ಕಾಪು ತಾಲೂಕಿನ ಇನ್ನಂಜೆ ಗ್ರಾಮದ ಉಂಡಾರು ದೇವಸ್ಥಾನದ ಕೆರೆಯಲ್ಲಿ ಯುವಕನ ಶವ ಪತ್ತೆಯಾಗಿದೆ.
ಮೃತ ಯುವಕನನ್ನು ಪಡುಬಿದ್ರಿ ನಿವಾಸಿ ವಿನಯ್ ರಾವ್ (26)ಎಂದು ಗುರುತಿಸಲಾಗಿದೆ. ಈತ ಗುರುವಾರ ರಾತ್ರಿ 12 ಗಂಟೆ ವೇಳೆಗೆ ದೇವಸ್ಥಾನದ ಬಳಿ ತಿರುಗಾಡುತ್ತಿರುವ ದೃಶ್ಯ ಸಿಸಿ ಕ್ಯಾಮರದಲ್ಲಿ ಪತ್ತೆಯಾಗಿದೆ. ಹೀಗಾಗಿ ಈತ ದೇವಸ್ಥಾನದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕಾಪು ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಉಡುಪಿಗೆ ಕೊಂಡೊಯ್ದಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.