ಉಡುಪಿ: ಕಾಪು ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿಯೋರ್ವರು ಪೊಲೀಸ್ ಕ್ವಾಟ್ರಸ್ ನಲ್ಲಿಯೇ ನೇಣಿಗೆ ಶರಣಾದ ಘಟನೆ ಇಂದು ಮುಂಜಾನೆ ನಡೆದಿದೆ.
ಜ್ಯೋತಿ (29) ಆತ್ಮಹತ್ಯೆ ಮಾಡಿಕೊಂಡ ಮಹಿಳಾ ಪೊಲೀಸ್ ಸಿಬ್ಬಂದಿ. ಜ್ಯೋತಿ ಅವರು, ಶುಕ್ರವಾರ ಎಂದಿನಂತೆ ಕರ್ತವ್ಯ ನಿರ್ವಹಿಸಿದ್ದರು. ರಾತ್ರಿ ಕ್ವಾಟ್ರಸ್ ಗೆ ಮರಳಿದ್ದು ಶನಿವಾರ ಬೆಳಿಗ್ಗೆ ನೇಣಿಗೆ ಶರಣಾಗಿರುವುದಾಗಿ ತಿಳಿದುಬಂದಿದೆ.
ಮೃತ ಜ್ಯೋತಿಯವರ ಪತಿ ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿಯಾಗಿದ್ದು, ಅವರು ಬೆಳಿಗ್ಗೆ ಕರ್ತವ್ಯಕ್ಕೆ ಹೋಗಲೆಂದು ಹೊರಟಿದ್ದರು. ಈ ವೇಳೆ ಪತ್ನಿ ಜ್ಯೋತಿ ಆತ್ಮಹತ್ಯೆ ಮಾಡಿಕೊಂಡಿರುವುದು ಗಮನಕ್ಕೆ ಬಂದಿದೆ. ಕೂಡಲೇ ಅವರು ಪಕ್ಕದಲ್ಲಿರುವ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಹೋಗಿ ನೋಡಿದಾಗ ಮೃತಪಟ್ಟಿರುವ ವಿಚಾರ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ
ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿದ್ಧಲಿಂಗಪ್ಪ, ಡಿವೈಎಸ್ಪಿ ಅರವಿಂದ ಕಲಗುಜ್ಹಿ, ಕಾಪು ತಹಶೀಲ್ದಾರ್ ಪ್ರತಿಭಾ ಆರ್. ಮೊದಲಾದವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.