Karkala: ಅಜೆಕಾರು ಬಾಲಕೃಷ್ಣ ಪೂಜಾರಿ ಕೊಲೆ; ಪತ್ನಿಗೆ ಜಾಮೀನು

Share with

ಕಾರ್ಕಳ: ಕಳೆದ ವರ್ಷ ಅ. 20ರಂದು ಮರ್ಣೆ ಗ್ರಾಮದ ಅಜೆಕಾರಿನ ದೆಪ್ಪುತ್ತೆಯಲ್ಲಿ ನಡೆದಿದ್ದ ಬಾಲಕೃಷ್ಣ ಪೂಜಾರಿ (44) ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿದ್ದ ಪತ್ನಿ ಪ್ರತಿಮಾ (36)ಗೆ ಹೈಕೋರ್ಟ್‌ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಇನ್ನೊರ್ವ ಆರೋಪಿ ಪ್ರಿಯಕರ ದಿಲೀಪ್ ಹೆಗ್ಡೆ ಕೂಡ ಇತ್ತೀಚೆಗೆ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ. ಮೃತ ಬಾಲಕೃಷ್ಣ ಅವರ ಪತ್ನಿ ಪ್ರತಿಮಾ ಮತ್ತು ಪ್ರಿಯಕರ ದಿಲೀಪ್‌ ಸೇರಿ ಈ ಕೊಲೆ ಎಸಗಿದ್ದಾರೆ ಎಂಬ ಆರೋಪದಡಿ ಅ. 25ರಂದು ಅಜೆಕಾರು ಠಾಣೆ ಪೊಲೀಸರು ಇಬ್ಬರನ್ನೂ ಬಂಧಿಸಿದ್ದರು.


Share with

Leave a Reply

Your email address will not be published. Required fields are marked *