ಕಾರ್ಕಳ: ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ; ಇಬ್ಬರು ಮಹಿಳೆಯರಿಗೆ ಗಾಯ

Share with

Karkala: Blast in Sudumaddu manufacturing plant

ಉಡುಪಿ: ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟಗೊಂಡ ಪರಿಣಾಮ ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ ಕಜೆ ಎಂಬಲ್ಲಿ ಬುಧವಾರ ನಡೆದಿದೆ. ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ ಕಜೆ ಎಂಬಲ್ಲಿ ಕೆಲವಾರು ವರ್ಷಗಳಿಂದ ಸುಡುಮದ್ದು ತಯಾರಿಕಾ ಘಟಕ ಕಾರ್ಯಾಚರಿಸುತ್ತಿದ್ದು, ಎಂದಿನಂತೆ ಇಂದು ಬೆಳಗ್ಗೆ ಸುಡುಮದ್ದು ತಯಾರಿಕೆ ಸಂದರ್ಭ ಅನಿರೀಕ್ಷಿತವಾಗಿ ಸ್ಫೋಟಗೊಂಡಿದೆ.

ಸುಡುಮದ್ದು ತಯಾರಿಕಾ ಘಟಕದಲ್ಲಿ 3 ಬೇರೆ ಬೇರೆ ಕಟ್ಟಡಗಳಿದ್ದು, ಒಂದು ಕಟ್ಟಡ ಸ್ಫೋಟಕ್ಕೆ ತುತ್ತಾಗಿದೆ. ಸ್ಫೋಟದ ಸಂದರ್ಭ ಒಳಗೆ ಕೆಲಸ ನಿರ್ವಹಿಸುತ್ತಿರುವ ಮಹಿಳೆಯರು ಗಾಯಗೊಂಡಿದ್ದಾರೆ. ಕಟ್ಟಡದ ಮೇಲ್ಛಾವಣಿ ಹೊತ್ತಿ ಉರಿದಿದ್ದು ಕಟ್ಟಡ ಸಂಪೂರ್ಣ ಹಾನಿ ಆಗಿದೆ. ಗಾಯಗೊಂಡ ಮಹಿಳೆಯರಿಬ್ಬರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.


Share with

Leave a Reply

Your email address will not be published. Required fields are marked *