ಕಾರ್ಕಳ ಅತ್ಯಾಚಾರ ಪ್ರಕರಣ; ಮೂರನೇ ಆರೋಪಿಯ ಬಂಧನ

Share with

ಉಡುಪಿ: ಕಾರ್ಕಳದಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಸೋಮವಾರ(ಆ 26) ಮೂರನೇ ಆರೋಪಿ ಅಭಯ್(23) ಕಾರ್ಕಳ ಎಂಬಾತನನ್ನು ಬಂಧಿಸಲಾಗಿದೆ. ಅಭಯ್ ಪ್ರಕರಣದ ಪ್ರಥಮ ಆರೋಪಿ ಅಲ್ತಾಫ್ ಗೆ ಮಾದಕ ವಸ್ತು ಕೊಟ್ಟಿದ್ದಾನೆ ಎಂದು ನಮಗೆ ಪ್ರಥಮವಾಗಿ ತನಿಖೆಯಲ್ಲಿ ಕಂಡುಬಂದಿದೆ. ಕೃತ್ಯ ಎಸಗಿದ ಮೇಲೆ, ಪ್ರಥಮ ಆರೋಪಿ ತಪ್ಪಿಸಿಕೊಳ್ಳಲು ಸಹಕಾರ ಮಾಡುವುದಕ್ಕೆ ಪ್ರಯತ್ನ ಮಾಡಿರುವುದು ನಮಗೆ ತನಿಖೆಯಲ್ಲಿ ಕಂಡುಬಂದಿರುತ್ತದೆ. ಈಗ ಆತನನ್ನು ಬಂಧಿಸಿ ನಾಳೆ ನ್ಯಾಯಾಲಯದ ಮುಂದೆ ಹಾಜರುಪಡಿಸಿ, ಕಸ್ಟಡಿಗೆ ಪಡೆದುಕೊಂಡು, ಆತನನ್ನು ಸಂಪೂರ್ಣ ತನಿಖೆ ನಡೆಸಿ, ಮುಂದೆ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್ ತಿಳಿಸಿದ್ದಾರೆ.


NDPS ಪ್ರಕರಣದಲ್ಲಿ ಅಭಯ್ ನನ್ನು ಬಂಧಿಸಲಾಗಿದ್ದು, ಇನ್ನಿಬ್ಬರು ಸಂಶಯವಿರುವ ವ್ಯಕ್ತಿಗಳನ್ನು ವಶಕ್ಕೆ ಪಡೆದಿದ್ದು, ಅವರ ತನಿಖೆ ನಡೆಸಿ ಅವರ ಪಾತ್ರದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಡಾ.ಕೆ.ಅರುಣ್ ತಿಳಿಸಿದ್ದಾರೆ.
ಅಲ್ತಾಫ್ ಹಾಗೂ ಶ್ರಾವೆದ್‌ ರಿಚರ್ಡ್‌ ಕ್ವಾಡ್ರಸ್‌ ಎಂಬವರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.


Share with

Leave a Reply

Your email address will not be published. Required fields are marked *