ಕಾರ್ಕಳ: ಕಲ್ಲು ಸಾಗಾಟದ ಲಾರಿ ಪಲ್ಟಿ; ಇಬ್ಬರು ಮೃತ್ಯು

Share with

ಉಡುಪಿ: ಕಲ್ಲು ತುಂಬಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿಯಾಗಿ ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಸಮೀಪದ ಕಲ್ಲು ಕೊರೆಯ ಬಳಿ ನಡೆದಿದೆ.
ಮೃತರನ್ನು ಕೊಪ್ಪಳ ಜಿಲ್ಲೆಯ ಯಲಬುರ್ಗಿ ದೇವಲಾಪುರ ನಿವಾಸಿ ಕರಿಯಪ್ಪ(26) ಮತ್ತು ನರಿಯಪ್ಪ(27) ಎಂದು ಗುರುತಿಸಲಾಗಿದೆ.
ಕಾರ್ಕಳ ನಿಟ್ಟೆ ಬ್ರಹ್ಮರಿ ಕ್ರಾಸ್ ಸಮೀಪ ಲಾರಿಯಲ್ಲಿ ಕಲ್ಲು ಲೋಡ್ ಮಾಡಿಕೊಂಡು ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಕಲ್ಲು ಹೇರಿಕೊಂಡು ಹೋಗುತ್ತಿದ್ದ ಲಾರಿ ಕೋರೆಯ ಪಕ್ಕದ ಇಳಿಜಾರು ರಸ್ತೆಯಲ್ಲಿ ಚಲಿಸುತ್ತಿದ್ದ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದ್ದು, ಈ ವೇಳೆ ಕಾರ್ಮಿಕರು ಲಾರಿಯ ಚಕ್ರದ ಅಡಿಯಲ್ಲಿ ಸಿಲುಕಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಕಾರ್ಕಳ ಡಿವೈಎಸ್ಪಿ ಅರವಿಂದ ಕಲಗುಜ್ಜಿ ಹಾಗೂ ಕಾರ್ಕಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.


Share with

Leave a Reply

Your email address will not be published. Required fields are marked *