ಬೆಂಗಳೂರು: ಕರ್ನಾಟಕ ಬಂದ್ ಕರೆ ಬೆನ್ನಲ್ಲೇ ಇಂದು(ಸೆ.28) ಮಧ್ಯರಾತ್ರಿಯಿಂದಲೇ ನಗರದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್, ಇಂದು(ಸೆ.28) ಮಧ್ಯರಾತ್ರಿ 12 ಗಂಟೆಯಿಂದ ನಾಳೆ(ಸೆ.29) ಮಧ್ಯರಾತ್ರಿ 12 ಗಂಟೆಯವರೆಗೆ 144 ಸೆಕ್ಷನ್ ಜಾರಿ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಇನ್ನು 144 ಸೆಕ್ಷನ್ ಜಾರಿ ವೇಳೆ ಐದಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ, ಬಂದ್ ವೇಳೆ ಆಸ್ತಿ ಪಾಸ್ತಿ ನಾಶ ಮತ್ತು ಸಾವು ನೋವಿಗೆ ಸಂಘಟಕರೇ ಹೊಣೆಯಾಗುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ.