ವಿಟ್ಲ: ಕರ್ನಾಟಕ ಬ್ಯಾಂಕ್ ದರೋಡೆ ಪ್ರಕರಣ; ಮೂವರು ಆರೋಪಿಗಳ ಬಂಧನ

Share with

ವಿಟ್ಲ: ಕರ್ಣಾಟಕ ಬ್ಯಾಂಕ್ ಕಿಟಕಿ ಮೂಲಕ ಒಳ ನುಸುಳಿ ಕೋಟ್ಯಾಂತರ ಮೌಲ್ಯದ ನಗದು ಹಾಗೂ ಚಿನ್ನಾಭರಣ ಕಳ್ಳತನ ಮಾಡಿದ ನಾಲ್ಕು ಮಂದಿ ಆರೋಪಿಗಳ ಪೈಕಿ ಮೂವರನ್ನು ಮಾ.11ರಂದು ಸ್ಥಳ ಮಹಜರಿಗೆ ಅಡ್ಯನಡ್ಕ ಪೊಲೀಸರು ಕರೆದುಕೊಂಡು ಬಂಧಿಸಿದ್ದಾರೆ.

ನಗದು ಹಾಗೂ ಚಿನ್ನಾಭರಣ ಕಳ್ಳತನ ಮಾಡಿದ ನಾಲ್ಕು ಮಂದಿ ಆರೋಪಿಗಳ ಪೈಕಿ ಮೂವರನ್ನು ಮಾ.11ರಂದು ಸ್ಥಳ ಮಹಜರಿಗೆ ಅಡ್ಯನಡ್ಕ ಪೊಲೀಸರು ಕರೆದುಕೊಂಡು ಬಂಧಿಸಿದ್ದಾರೆ.

ಕಾಸರಗೋಡು ಮೂಲದ ಖಲಂದರ್, ರಫೀಕ್, ಬಾಯಾರು ಮೂಲದ ದಯಾನಂದ ಕಳ್ಳತನದ ಪ್ರಮುಖ ರುವಾರಿಗಳು ಎನ್ನಲಾಗಿದೆ. ಫೆ.25ರಂದು ಈ ಆರೋಪಿಗಳನ್ನು ಪೊಲಿಸರು ವಶಕ್ಕೆ ಪಡೆಯುವ ಕಾರ್ಯವನ್ನು ಮಾಡಿದ್ದು, ಮಾ.10ರಂದು ಬಂಧನವನ್ನು ಅಧಿಕೃತಗೊಳಿಸಿದ್ದಾರೆ.

ಬ್ರೀಝಾ ಕಾರಿನ ಮೂಲಕ ಆಗಮಿಸಿದ ಕಳ್ಳರು ಬ್ಯಾಂಕ್ ಕಿಟಕಿಯ ಸರಳು ತುಂಡರಿಸಿ, ಸೇಪ್ ಲಾಕರ್ ಬಾಗಿಲನ್ನು ಗ್ಯಾಸ್ ಕಟ್ಟರ್ ಮೂಲಕ ಕೊರೆದು ಲಾಕರ್ ನಲ್ಲಿದ್ದ ನಗದು ಹಾಗೂ ಚಿನ್ನಾಭರಣವನ್ನು ದೋಚಿದ್ದರು. ಆ ಬಳಿಕ ನಾಲ್ಕು ಮಾಡಿಕೊಂಡ ಕಳ್ಳರು ಒಂದು ಪಾಲನ್ನು ಬಾಯಾರಿನ ಪೊಸಡಿ ಗುಂಪೆ ಗುಡ್ಡದ ತಪ್ಪಲಿನ ಸಂಜಂಕಿಲ ಸಮೀಪ ನಿರ್ಜನ ಪ್ರದೇಶದಲ್ಲಿರುವ ಆಟದ ಮೈದಾನವೊಂದರಲ್ಲಿ ಇದನ್ನು ಅಡಗಸಿಟ್ಟಿರುವ ವಿಚಾರವನ್ನು ವಿಚಾರಣೆ ವೇಳೆ ಬಹಿರಂಗ ಪಡಿಸಿದ್ದರು.

ಕೆಲವು ವರ್ಷಗಳಿಂದ ವೆಲ್ಡರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿ ಸೇಪ್ ಲಾಕರ್ ತುಂಡರಿಸಲು ಸಹಕರಿಸಿದ್ದು, ಕಾಸರಗೋಡು ಮೂಲದ ವಿವಿಧ ಪ್ರಕರಣದಲ್ಲಿ ಆರೋಪಿಗಳಾಗಿರುವವರು ಎಂದು ತನಿಖೆಯಿಂದ ತಿಳಿದು ಬಂದಿದೆ.


Share with

Leave a Reply

Your email address will not be published. Required fields are marked *