ಸಿಎಂ ಸಿದ್ದರಾಮಯ್ಯ ಅವರು 2025-26 ನೇ ಸಾಲಿನ 16ನೇ ಬಜೆಟ್ ಮಂಡನೆ ಮಾಡುತ್ತಿದ್ದು, ಈ ಬಾರಿಯ ಬಜೆಟ್‌ನಲ್ಲಿ ಸಾಕಷ್ಟು ನಿರೀಕ್ಷೆಗಳು ಇದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್ ಮಂಡನೆಯಲ್ಲಿ ಪುತ್ತೂರಿಗೆ ಮೆಡಿಕಲ್ ಕಾಲೇಜು ಮಂಜೂರು ಮಾಡಿದ್ದಾರೆ. ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ಮುಂದಾಗಿದೆ. 100 ಹಾಸಿಗೆ ಸಾಮರ್ಥ್ಯದ ತಾಲೂಕು ಆಸ್ಪತ್ರೆಯನ್ನು ಉನ್ನತೀಕರಿಸಿ ಪ್ರಸಕ್ತ ವರ್ಷದಲ್ಲಿ ಕ್ರಮ ವಹಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ಹೇಳಿದ್ದಾರೆ.ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗಳನ್ನು ಒಟ್ಟು 650 ಕೋಟಿ ರೂ. ವೆಚ್ಚದಲ್ಲಿ ನವೀಕರಣ ಮಾಡಲಾಗುವುದು.