ಬೆಂಗಳೂರು: ಸೆ.29 ನಡೆಯಲಿರುವ ಕರ್ನಾಟಕ ಬಂದ್ ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ಬೆಂಬಲವನ್ನು ಸೂಚಿಸಿದ್ದು, ಅಂದು ನಡೆಯುವ ಪ್ರತಿಭಟನೆಯಲ್ಲಿ ಕನ್ನಡದ ನಟ-ನಟಿಯರು ಹಾಗೂ ತಂತ್ರಜ್ಞರು ಪಾಲ್ಗೊಳ್ಳಲಿದ್ದಾರೆ ಹಾಗೂ ಅಂದು ಚಿತ್ರೋದ್ಯಮದ ಎಲ್ಲಾ ಚಟುವಟಿಕೆಗಳನ್ನು ಬಂದ್ ಮಾಡಿ ಎಲ್ಲರೂ ಬಂದ್ ಗೆ ಬೆಂಬಲ ವ್ಯಕ್ತಪಡಿಸಲಿದ್ದಾರೆ ಎಂದು ವಾಣಿಜ್ಯ ಮಂಡಳಿಯ ಅಧ್ಯಕ್ಷ ಎನ್.ಎಂ ಸುರೇಶ್ ಅವರು ಹೇಳಿದ್ದಾರೆ.
ಈ ಸಂದರ್ಭದಲ್ಲಿ ಚಲನಚಿತ್ರ ಮಂಡಳಿಯ ಕಚೇರಿಯವರೆಗೆ ಬಂದು ಬಂದ್ ಗೆ ಬೆಂಬಲ ಕೋರಿದ ವಾಟಾಳ್ ನಾಗರಾಜ್ ಹಾಗೂ ಸಾ.ರಾ ಗೋವಿಂದು ಸೇರಿದಂತೆ ಎಲ್ಲಾ ಕನ್ನಡಪರ ಸಂಘಟನೆಗಳ ಸದಸ್ಯರಿಗೆ ಅವರು ಧನ್ಯವಾದ ತಿಳಿಸಿದರು.