ಕರ್ನಾಟಕ ಹವಾಮಾನ: ಮುಂದಿನ 5 ದಿನಗಳ ಕಾಲ ವರುಣನ ಅಬ್ಬರ, ಎಲ್ಲೆಲ್ಲಿ ಮಳೆ?

Share with

ಬೆಂಗಳೂರು, ನವೆಂಬರ್ 02: ರಾಜ್ಯದಲ್ಲಿ ಚಳಿಯ ನಡುವೆ ಮುಂದಿನ 5 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದ ಕೆಲವೆಡೆ ನಾಳೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದ್ದು, ಉತ್ತರ ಒಳನಾಡು ಭಾಗದಲ್ಲಿ ಒಣ ಹವೆ ಮುಂದುವರಿಯಲಿದೆ. ಬೆಂಗಳೂರಲ್ಲಿ ಮೋಡಕವಿದ ವಾತಾವರಣ ಅಥವಾ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಯಾವ್ಯಾವ ಪ್ರದೇಶಗಳಲ್ಲಿ ಮಳೆ?

ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ ಮತ್ತು ಕೋಲಾರದಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಉಳಿದಂತೆ ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ. ಉತ್ತರ ಒಳನಾಡು ಭಾಗದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿಯೂ ಒಣ ಹವೆಯ ವಾತಾವರಣವನ್ನು ಅಂದಾಜಿಸಲಾಗಿದೆ.  ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಸಾಧಾರಣ ಮಳೆಯ ನಿರೀಕ್ಷೆ ಇದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣ ಹವೆ ಕಂಡುಬರಲಿದೆ.

ಬೆಂಗಳೂರು ನಗರದಲ್ಲಿಯೂ ಸಾಧಾರಣ ಮಳೆ ಅಥವಾ ಮೋಡ ಕವಿದ ವಾತಾವರಣ ಕಂಡುಬರುವ ಸಾಧ್ಯತೆ ಇದೆ. ನಗರದ ಗರಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಗಾಳಿಯ ವೇಗ ಗಂಟೆಗೆ 6-13 ಕಿ.ಮೀ. ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


Share with

Leave a Reply

Your email address will not be published. Required fields are marked *