ಸುಪ್ರೀಂ ಕೋರ್ಟ್ ಅಂಗಳದಲ್ಲಿ ಕರ್ನಾಟಕದ ಹನಿಟ್ರ್ಯಾಪ್ ಪ್ರಕರಣ

Share with

ದೆಹಲಿ : ಕರ್ನಾಟಕದಲ್ಲಿ ನಡೆದ ಹನಿ ಟ್ರ್ಯಾಪಿಂಗ್ ಪ್ರಕರಣ ಇದೀಗ ಸುಪ್ರಿಂ ಕೋರ್ಟ್ ಮೆಟ್ಟಿಲೇರಿದೆ. ಈ ಪ್ರಕರಣದ ಸಂಬಂಧ ತನಿಖೆಗೆ ಆಗ್ರಹಿಸಿ ಸುಪ್ರೀಂಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ. ಪ್ರಕರಣದ ವಿಚಾರಣೆಯನ್ನು ಕೂಡಲೇ ಕೈಗೆತ್ತಿಕೊಳ್ಳಬೇಕೆಂದು ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಎದುರು ಅರ್ಜಿದಾರರು ಮನವಿ ಮಾಡಿದ್ದಾರೆ. ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಳ್ಳಲು ಸುಪ್ರೀಂಕೋರ್ಟ್ ಒಪ್ಪಿದೆ. ಹಾಗೆಯೇ ಈ ಪ್ರಕರಣದಲ್ಲಿ ನ್ಯಾಯಮೂರ್ತಿ ಹೆಸರೂ ಕೂಡ ಇರುವುದನ್ನು ಅರ್ಜಿದಾರರು ವಿಚಾರಣೆ ಸಂದರ್ಭದಲ್ಲಿ ಉಲ್ಲೇಖಿಸಿದ್ದಾರೆ.ಕರ್ನಾಟಕದಲ್ಲಿ ನಡೆದ ಹನಿ-ಟ್ರ್ಯಾಪ್ ಹಗರಣಕ್ಕೆ ಸಂಬಂಧಿಸಿದಂತೆ ಹಿರಿಯ ಸಚಿವರು ಮತ್ತು ಶಾಸಕರು, ರಾಜಕೀಯ ಮುಖಂಡರು ಮತ್ತು ನ್ಯಾಯಮೂರ್ತಿಗಳು ಸೇರಿದಂತೆ 48 ಜನರನ್ನು ಸಿಲುಕಿಸಿರುವ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ಯನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಪೀಠದೆದುರು ತರಲಾಗಿದೆ.


Share with

Leave a Reply

Your email address will not be published. Required fields are marked *