ಕಾಸರಗೋಡು: ಜೂ.16(ನಾಳೆ) ರೆಡ್ ಅಲರ್ಟ್ ಘೋಷಣೆ; ಶಾಲಾ ಕಾಲೇಜುಗಳಿಗೆ ರಜೆ

Share with

ಕಾಸರಗೋಡು: ಜೂ.16 ರಂದು ಕಾಸರಗೋಡು ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯ ಬಗ್ಗೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದ ಹಿನ್ನೆಲೆಯಂತೆ ಜಿಲ್ಲೆಯಲ್ಲಿ ರೆಡ್‌ ಅಲರ್ಟ್ ಘೋಷಿಸಲಾಗಿದೆ.

ಸಾರ್ವಜನಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ತೆಗೆದುಕೊಂಡ ಮುನ್ನೆಚ್ಚರಿಕೆ ಕ್ರಮಗಳ ಭಾಗವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಈ ಪರಿಸ್ಥಿತಿಯಲ್ಲಿ, ಜೂನ್ 16 ರ ಸೋಮವಾರದಂದು ಜಿಲ್ಲೆಯ ಕಾಲೇಜುಗಳು, ವೃತ್ತಿಪರ ಕಾಲೇಜುಗಳು, ಕೇಂದ್ರೀಯ ವಿದ್ಯಾಲಯಗಳು, ಶಾಲೆಗಳು, ಮದರಸಗಳು, ಅಂಗನವಾಡಿಗಳು ಮತ್ತು ವಿಶೇಷ ತರಗತಿಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಘೋಷಿಸಿದ್ದಾರೆ.


Share with

Leave a Reply

Your email address will not be published. Required fields are marked *