ಕಾಸರಗೋಡು: ಮಂಜೇಶ್ವರದ ಕುಂಜತ್ತೂರು ಪದವು ಎಂಬಲ್ಲಿ ಮುಲ್ಕಿ ಕೊಲ್ನಾಡು ನಿವಾಸಿ ಆಟೋ ಚಾಲಕ ಮುಹಮ್ಮದ್ ಶರೀಫ್ (52) ಅವರ ನಿಗೂಡ ಸಾವು ಕೊಲೆ ಕೃತ್ಯ ಎಂದು ಪ್ರಾಥಮಿಕ ಹಂತದ ಮರಣೋತ್ತರ ಪರೀಕ್ಷಾ ವರದಿ ತಿಳಿಸಿದೆ.
ಶರೀಫ್ ಅವರ ಕೈ, ತಲೆ ಹಾಗೂ ಕುತ್ತಿಗೆಯಲ್ಲಿ ಮಾರಕಾಸ್ತ್ರ ಗಳಿಂದ ಕಡಿದ ಗಾಯಗಳಾಗಿವೆ ಎಂದು ಮರಣೋತ್ತರ ಪರೀಕ್ಷೆಯಿಂದ ದೃಢಪಟ್ಟಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕುತ್ತಿಗೆಗೆ ಆಗಿರುವ ಬಲವಾದ ಗಾಯ ಸಾವಿಗೆ ಪ್ರಮುಖ ಕಾರಣ ಎಂದು ಮರಣೋತ್ತರ ಪರೀಕ್ಷಾ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಮೃತದೇಹ ಗಂಟೆಗಳ ಕಾಲ ನೀರಿನಲ್ಲಿದ್ದರೂ ಶ್ವಾಸಕೋಶದೊಳಗೆ ನೀರು ನುಗ್ಗಿಲ್ಲ. ಇದರಿಂದ ಶರೀಫ್ ರನ್ನು ಕೊಲೆಗೈದು ಬಳಿಕ ಬಾವಿಗೆ ಎಸೆದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ