ಕಾಸರಗೋಡು: ಸಾಲಬಾಧೆಯಿಂದ ಕೊಡಕ್ಕಾಡ್ ನಿವಾಸಿ ವೃದ್ಧ ನೇಣು ಮನೆಯ ಮಹಡಿಯಲ್ಲಿ ಪತ್ತೆಯಾಗಿದ್ದಾರೆ. ಚೀಮೆನಿ ಪೊಲೀಸ್ ಠಾಣೆ ವ್ಯಾಪ್ತಿಯ ಕೊಡಕ್ಕಾಡ್ ಓಲಾಟೆ ನಿವಾಸಿ ಒ ರವಿಂದ್ರ ನ್ (70) ಆತ್ಮಹತ್ಯೆ ಮಾಡಿಕೊಂಡವರು. ನಿನ್ನೆ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆ ಮಧ್ಯೆ ಈ ಘಟನೆ ನಡೆದಿದೆ.ಮನೆಯ ಮಹಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಕೂಡಲೇ ಚಿರುವತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು.ಆದರೂ ಜೀವ ಉಳಿಸಲು ಸಾಧ್ಯವಾಗಿಲ್ಲ. ಚಿಮೇನಿ ಪೋಲೀಸರು ಪ್ರಕರಣ ದಾಖಲಿಸಿದ್ದಾರೆ.