ಉಪ್ಪಳ: ಕಾಸರಗೋಡು ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ವಿವಿಧ ಪಕ್ಷದ ಅಭ್ಯರ್ಥಿಗಳು ಪ್ರಚಾರ ಬಿರುಸುನಿಂದ ನಡೆಯುತ್ತಿದೆ. ಬಿಜೆಪಿ ಅಭ್ಯರ್ಥಿ ಎಂ.ಎಲ್ ಅಶ್ವಿನಿ ಪಜ್ವ, ಯು.ಡಿ.ಎಫ್ ಅಭ್ಯರ್ಥಿ ರಾಜ್‌ಮೋಹನ್ ಉಣ್ಣಿತ್ತಾನ್, ಎಡರಂಗ ಅಭ್ಯರ್ಥಿ ಎಂ.ವಿ ಬಾಲಕೃಷ್ಣನ್ ಮಾಸ್ತರ್ ರವರು ಮಂಜೇಶ್ವರ ವಿಧಾನಸಭಾ ಕ್ಷೇತ್ರದ ವಿವಿಧ ಕಡೇಗಳಲ್ಲಿ ಪ್ರಚಾರದಲ್ಲಿ ನಿರತರಾಗಿದ್ದಾರೆ.
ಮಂಜೇಶ್ವರ ವಿಧಾನ ಸಭಾ ಕ್ಷೇತ್ರದಲ್ಲಿ ಯುಡಿಎಫ್ ಅಭ್ಯರ್ಥಿ ರಾಜ್‌ಮೋಹನ್ ಉಣ್ಣಿತ್ತಾನ್ ರವರು ಸೋಮವಾರ ಕುಬಳೆ ಆರಿಕ್ಕಾಡಿ ಕುಂಬೋಳ್ ತಂಗಳ್, ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮ, ಆವಳ ಮಠ, ಉದ್ಯಾವರ ಮಾಡ ಕ್ಷೇತ್ರ, ಸಾವಿರ ಜಮಾಯತ್ ಮಸೀದಿ ಸಹಿತ ವಿವಿಧ ಧಾರ್ಮಿಕ ಕ್ಷೇತ್ರ ಹಿರಿಯರ ಭೇಟಿ ಮಾಡಿ ಆಶೀರ್ವಾದ ಪಡೆದರು. ನಾಳೆ ನಾಮಪತ್ರ ಸಲ್ಲಿಸಲಾಗುವುದೆಂದು ನೇತಾರರು ತಿಳಿಸಿದ್ದಾರೆ.
ಅದೇ ರೀತಿ ಬಿಜೆಪಿ ಅಭ್ಯರ್ಥಿ ಎಂ.ಎಲ್ ಅಶ್ವಿನಿ ಪಜ್ವರವರು ಬಂಗ್ರಮಂಜೇಶ್ವರ ಶ್ರೀ ಕಾಳಿಕಾಪರಮೇಶ್ವರೀ ದೇವಸ್ಥಾನದಲ್ಲಿ ಪ್ರಾರ್ಥಿಸಿ ಬಳಿಕ ಹೊಸಂಗಡಿ ಶ್ರೀ ಅಯ್ಯಪ್ಪ ಕ್ಷೇತ್ರ ಸಹಿತ ಮಂಜೇಶ್ವರ ಪಂಚಾಯತ್ ವ್ಯಾಪ್ತಿಯ ಸಮುದ್ರ ತೀರ ಪ್ರದೇಶ ಹಾಗೂ ವಿವಿಧ ಕಡೆಗಳಲ್ಲಿ ಪ್ರಚಾರ ನಡೆಸಿ ರಾತ್ರಿ ವರ್ಕಾಡಿಯ ಬೇಕರಿ ಜಂಕ್ಷನ್‌ನಲ್ಲಿ ಬೈಕ್ ರ‍್ಯಾಲಿ, ರೋಡ್ ಶೋ, ಪಂಚಾಯತ್ ಚುನಾವಣಾ ಕಚೇರಿ ಉದ್ಘಾಟಿಸಿದರು. ಬಿಜೆಪಿ ನೇತಾರ ಸಹಿತ ಕಾರ್ಯಕರ್ತರು ಭಾರೀ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಎಡರಂಗ ಅಭ್ಯರ್ಥಿ ಎಂ.ವಿ ಬಾಲಕೃಷ್ಣ ಮಾಸ್ತರ್ ವಿವಿಧ ಕಡೇಗಳಲ್ಲಿ ಪ್ರಚಾರದಲ್ಲಿ ತೊಡಗಿದ್ದು, ಎಣ್ಮಕಜೆ ಪಂಚಾಯತಿನ ಕಾಟುಕ್ಕುಕೆ ಯಿಂದ ಪರ್ಯಾಟನೆ ಆರಂಭವಾಯಿತು. ಸುಭಾಷ್ ನಗರ, ಬಾಯಾರು ಪದವು, ಪೈವಳಿಕೆ, ಮೀಯಪದವು, ನಡೆಸಿ ಸುಳ್ಯಮೆಯಲ್ಲಿ ಸಮಾಪ್ತಿ ಗೊಂಡಿತ್ತು.