ಕಾಸರಗೋಡು: ಕಾಸರಗೋಡು ಜಿಲ್ಲೆಯಾಧ್ಯಂತ ಧಾರಾಕಾರ ಮಳೆಯಾಗುತ್ತಿದ್ದು ಪರಿಣಾಮ ಇಲ್ಲಿನ ಇತಿಹಾಸ ಪ್ರಸಿದ್ದ ಮಧೂರು ಮದನಂತೇಶ್ವರ ಸಿದ್ದಿವಿನಾಯಕ ದೇವಸ್ಥಾನ ಜಲಾವೃತಗೊಂಡಿದೆ.
ಬುಧವಾರದಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಇಲ್ಲಿನ ಮಧುವಾಹಿನಿ ನದಿ ತುಂಬಿ ಹರಿಯುತ್ತಿದ್ದು ದೇವಸ್ಥಾನದ ಒಳಭಾಗ ಜಲಾವೃತಗೊಂಡಿದೆ. ಅಲ್ಲದೆ ತಗ್ಗು ಪ್ರದೇಶಗಳು ನೀರಿನಿಂದ ಆವೃತಗೊಂಡಿದೆ.