ಅಯೋಧ್ಯೆ: ಅಯೋಧ್ಯೆಯ ಭವ್ಯ ರಾಮ ಮಂದಿರದಲ್ಲಿ ನಮಾಜ್ ಮಾಡಲು ಯತ್ನಿಸಿದ ಕಾಶ್ಮೀರಿ ವ್ಯಕ್ತಿಯನ್ನು ಭದ್ರತಾ ಸಿಬ್ಬಂದಿ ಬಂಧಿಸಿರುವ ಘಟನೆ ಇಂದು (ಜ.10) ನಡೆದಿದೆ. ಘಟನೆಯಿಂದ ಮಂದಿರದ ಆವರಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣಗೊಂಡಿತ್ತು.

ಬಂಧಿತ ವ್ಯಕ್ತಿಯನ್ನು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಅಹ್ಮದ್ ಶೇಖ್ (55) ಎಂದು ಗುರುತಿಸಲಾಗಿದೆ.
ಶುಕ್ರವಾರ (ಜ.10) ಮಂದಿರಕ್ಕೆ ಭೇಟಿ ನೀಡಿದ್ದ ಈತ, ಬಳಿಕ ಅಲ್ಲಿನ ‘ಸೀತಾ ರಸೋಯಿ’ ಪ್ರದೇಶದ ಬಳಿ ಕುಳಿತು ನಮಾಜ್ ಮಾಡಲು ಸಿದ್ಧತೆ ನಡೆಸಿದ್ದ ಎಂದು ಮೂಲಗಳು ತಿಳಿಸಿವೆ. ಇದನ್ನು ಗಮನಿಸಿದ ಭದ್ರತಾ ಸಿಬ್ಬಂದಿ ತಕ್ಷಣವೇ ಆತನನ್ನು ತಡೆದಿದ್ದಾರೆ ಇದರಿಂದ ಸಿಟ್ಟಿಗೆದ್ದ ಆತ ಘೋಷಣೆಗಳನ್ನು ಕೂಗಿದ್ದಾನೆ ಎಂದು ಅಲ್ಲಿದ್ದ ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ .
ವಶಕ್ಕೆ ಪಡೆದ ಪೊಲೀಸರು ಮತ್ತು ಗುಪ್ತಚರ ಸಂಸ್ಥೆ ಕಾಶ್ಮೀರಿ ವ್ಯಕ್ತಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದು. ಆತ ಅಯೋಧ್ಯೆಗೆ ಬಂದ ಉದ್ದೇಶವೇನು? ಈ ಕೃತ್ಯದ ಹಿಂದೆ ಬೇರೆ ಯಾರಾದರೂ ಇದ್ದಾರೆಯೇ? ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಇನ್ನು ವಿಚಾರಣೆ ವೇಳೆ ಆತ ತಾನು ಅಜೀರ್‌ಗೆ ತೆರಳುವವನು ಇಲ್ಲಿಗೆ ಬಂದಿದ್ದೇನೆ ಎಂದು ಹೇಳಿಕೊಂಡಿದ್ದಾನೆ. ಅಲ್ಲದೆ ಆತನನ್ನು ತಪಾಸಣೆ ನಡೆಸಿದ ವೇಳೆ ಆತನ ಬಳಿ ಗೋಡಂಬಿ ಮತ್ತು ಒಣದ್ರಾಕ್ಷಿಗಳು ಪತ್ತೆಯಾಗಿವೆ. ಸದ್ಯ ಪೊಲೀಸರು ವ್ಯಕ್ತಿಯನ್ನು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.




