ಕಾವಳಕಟ್ಟೆ: KSRTC ಬಸ್–ದ್ವಿಚಕ್ರ ವಾಹನ ಮಧ್ಯೆ ಡಿಕ್ಕಿ..; ಸ್ಕೂಟರ್ ಸವಾರ ಮೃ*ತ್ಯು

Share with

ಪುಂಜಾಲಕಟ್ಟೆ: ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಮತ್ತು ದ್ವಿಚಕ್ರ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರನೋರ್ವ ಮೃತಪಟ್ಟ ಘಟನೆ ಬಂಟ್ವಾಳ-ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಕಾವಳಕಟ್ಟೆ ಸಮೀಪದ ಎನ್‌.ಸಿ.ರೋಡ್ ಎಂಬಲ್ಲಿ ಸೆ.19ರಂದು ಸಂಭವಿಸಿದೆ.

ಬೆಳ್ತಂಗಡಿ ತಾಲೂಕಿನ ಬಜಿರೆ ಕ್ರಾಸ್ ಕಟ್ಟೆ ನಿವಾಸಿ ರಾಜೇಶ್ (36) ಮೃತಪಟ್ಟ ವ್ಯಕ್ತಿಯಾಗಿದ್ದಾರೆ.

ಧರ್ಮಸ್ಥಳ ಕಡೆಯಿಂದ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ.ಬಸ್ ವಗ್ಗ ಕಡೆಯಿಂದ ಬೆಳ್ತಂಗಡಿ ಕಡೆಗೆ ತೆರಳುತ್ತಿದ್ದ ಸ್ಕೂಟರ್ ಗೆ ಢಿಕ್ಕಿಯಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟ‌ರ್ ಸವಾರ ರಾಜೇಶ್ ಅವರನ್ನು ತತ್‌ಕ್ಷಣ ಆಂಬ್ಯುಲೆನ್ಸ್ ವಾಹನದಲ್ಲಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.

ಘಟನಾ ಸ್ಥಳಕ್ಕೆ ಪುಂಜಾಲಕಟ್ಟೆ ಎಸ್.ಐ.ರಾಜೇಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


Share with

Leave a Reply

Your email address will not be published. Required fields are marked *