ಕಾವೇರಿ ನಮ್ಮದು: ಪ್ರಧಾನಿ ಅವರಿಗೆ ರಕ್ತದಲ್ಲಿ ಪತ್ರ ಬರೆದ ನಟ ಪ್ರೇಮ್

Share with

ನಟ ನೆನಪಿರಲಿ ಪ್ರೇಮ್‌ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ.

ಬೆಂಗಳೂರು: ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯಕ್ಕೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿ ನಟ ನೆನಪಿರಲಿ ಪ್ರೇಮ್‌ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ.

ಕಾವೇರಿ ನೀರು ವಿಚಾರದಲ್ಲಿ ರೈತ ಮತ್ತು ಕನ್ನಡಪರ ಸಂಘಟನೆಗಳು ಹೋರಾಟ ನಡೆಸುತ್ತಿವೆ. ಎರಡು ಬಾರಿ ಬಂದ್‌ ನಡೆಸಿ ತಮಿಳುನಾಡಿಗೆ ನೀರು ಹರಿಸಬಾರದು ಎಂದು ಒತ್ತಾಯಿಸಿವೆ. ಕನ್ನಡ ಚಿತ್ರರಂಗದ ನಟ-ನಟಿಯರೂ ಕಾವೇರಿ ಹೋರಾಟಕ್ಕೆ ಬೆಂಬಲವನ್ನು ನೀಡಿದ್ದು, ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಕಾವೇರಿ ವಿಚಾರದಲ್ಲಿ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿ ನಟ ನೆನಪಿರಲಿ ಪ್ರೇಮ್‌ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದು, ಪತ್ರದಲ್ಲಿ “ದಯವಿಟ್ಟು ನಮ್ಮ ಕಾವೇರಿ ಮತ್ತು ಕರ್ನಾಟಕಕ್ಕೆ ನ್ಯಾಯ ಒದಗಿಸಿ” ಎಂದು ಇಂಗ್ಲಿಷ್‌ನಲ್ಲಿ ಬರೆದಿದ್ದು “ಕಾವೇರಿ ನಮ್ಮದು” ಎಂದು ಕನ್ನಡದಲ್ಲಿ ಬರೆದಿದ್ದಾರೆ.


Share with

Leave a Reply

Your email address will not be published. Required fields are marked *