ಕೇರಳ ಸರಣಿ ಸ್ಫೋಟ: ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿಕೆ

Share with

ತಿರುವನಂತಪುರಂ: ಒಂದು ವಾರದ ಹಿಂದೆ ಕೇರಳದ ಕ್ರಿಶ್ಚಿಯನ್ ಧಾರ್ಮಿಕ ಕೂಟದಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ 4ಕ್ಕೆ ಏರಿದೆ.

ಬಾಂಬ್ ಸ್ಫೋಟ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ 4ಕ್ಕೆ ಏರಿದೆ.

ಮೃತಪಟ್ಟ ಮಹಿಳೆಯನ್ನು ಕಲಮಸ್ಸೆರಿಯ ಮೋಲಿ ಜಾಯ್ ಎಂದು ಗುರುತಿಸಲಾಗಿದೆ, ಅಕ್ಟೋಬರ್ 29ರಂದು ಧಾರ್ಮಿಕ ಸಭೆಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮಹಿಳೆ ಸುಟ್ಟ ಗಾಯಗಳಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಗಂಭೀರ ಸ್ಥಿತಿಯಲ್ಲಿದ್ದ ಮಹಿಳೆ ಸೋಮವಾರದಂದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಎರ್ನಾಕುಲಂ ಜಿಲ್ಲೆಯ ಮಲಯತ್ತೂರ್‌ನ ಲಿಬಿನಾ ಎಂಬ ಬಾಲಕಿ ಅ.30ರಂದು ಕಲಮಸ್ಸೆರಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಳು. ಸ್ಫೋಟ ನಡೆದ ದಿನವೇ ಇಬ್ಬರು ಮಹಿಳೆಯರು ಮೃತಪಟ್ಟಿದ್ದರು. ಇದರೊಂದಿಗೆ ಸ್ಪೋಟದಲ್ಲಿ ಮೃತಪಟ್ಟವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ.


Share with

Leave a Reply

Your email address will not be published. Required fields are marked *