ಕೊಚ್ಚಿ: ಮತದಾರ ಪಟ್ಟಿ ವಿಶೇಷ ಸಮಗ್ರ ಪರಿಶೀಲನೆ ಕಾರ್ಯದಲ್ಲಿ ತೊಡಗಿದ್ದ ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ)ಯೊಬ್ಬ ಸಾರ್ವಜನಿಕವಾಗಿಮರ್ಮಾಂಗ ಪ್ರದರ್ಶಿಸಿದ ಘಟನೆ ಕೇರಳದ ಮಲಪ್ಪುರಂನಲ್ಲಿ ನಡೆದಿದೆ.

ಎಸ್ಐಆರ್ ಪ್ರಕ್ರಿಯೆಗಾಗಿ ಸಾಲುಗಟ್ಟಿ ನಿಂತಿದ್ದ ಮತದಾರರೊಂದಿಗೆ ಆರೋಪಿಯು ಕ್ಷುಲ್ಲಕ ಕಾರಣಕ್ಕೆ ವಾದ ಪ್ರಾರಂಭಿಸಿದ್ದಾನೆ. ಈ ವೇಳೆ ಕೆಲವರು ವೀಡಿಯೋ ಮಾಡಲು ಆರಂಭಿಸಿದ್ದಾರೆ. ಈ ವೇಳೆ ತಾಳ್ಮೆ ಕಳೆದುಕೊಂಡ ಬಿಎಲ್ಒ, ವೀಡಿಯೋ ತೆರೆಯುತ್ತಿದ್ದವರಿಗೆ ಮರ್ಮಾಂಗ ಪ್ರದರ್ಶಿಸಿದ್ದಾನೆ ಎಂದು ಆರೋಪಿಸಲಾಗಿದೆ. ಘಟನೆಯ ವೀಡಿಯೋ ವೈರಲ್ ಆಗುತ್ತಿದ್ದಂತೆ ಆರೋಪಿಯನ್ನು ಕರ್ತವ್ಯದಿಂದ ವಜಾಗೊಳಿಸಲಾಗಿದೆ.




