ತಿರುವನಂತಪುರ: ತಮ್ಮ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪ ಹಿನ್ನೆಲೆಯಲ್ಲಿ ಯುವ ಕಾಂಗ್ರೆಸ್ ರಾಜ್ಯ ಅಧ್ಯಕ್ಷ ರಾಹುಲ್ ಮಮ್‌ಕೂಟತಿಲ್ ತಮ್ಮ ಸ್ಥಾನಕ್ಕೆ ಗುರುವಾರ ರಾಜೀನಾಮೆ ನೀಡಿದ್ದಾರೆ.

ಇಂದು ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ರಾಹುಲ್ ಮಮ್‌ಕೂಟತಿಲ್, ಪಕ್ಷವು ತಮ್ಮ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ವರದಿಗಳನ್ನು ನಿರಾಕರಿಸಿದ್ದಾರೆ. ಮೂಲಗಳ ಪ್ರಕಾರ, ರಾಹುಲ್ ತಮ್ಮ ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ರಾಷ್ಟ್ರೀಯ ನಾಯಕತ್ವಕ್ಕೆ ನೀಡಿದ್ದಾರೆ. ತಮ್ಮ ನಿರ್ಧಾರವನ್ನು ಕೆಪಿಸಿಸಿ ಅಧ್ಯಕ್ಷ ಸನ್ನಿ ಜೋಸೆಫ್ ಅವರಿಗೆ ದೂರವಾಣಿ ಮೂಲಕ ತಿಳಿಸಿದ್ದಾರೆ.
ಮಾಜಿ ಯುವ ಕಾಂಗ್ರೆಸ್ ನಾಯಕ ಕೆ.ಎಂ. ಅಭಿಜಿತ್ ಅವರಿಗೆ ರಾಜ್ಯ ಘಟಕದ ತಾತ್ಕಾಲಿಕ ಉಸ್ತುವಾರಿ ನೀಡಲಾಗುತ್ತದೆ ಎಂಬ ಮಾತುಗಳು ಕೇಳಿಬರುತ್ತಿವೆ.




