ಕಿನ್ನಿಗೋಳಿ: ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದ ಆತ್ಮಹತ್ಯೆ

Share with

ಮೂಲ್ಕಿ:  ವಿದ್ಯಾರ್ಥಿನಿಯೊಬ್ಬಳು ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿ ರುವ ಘಟನೆ ಕಿನ್ನಿಗೋಳಿ ಸಮೀಪದ ದಾಮಸ್‌ಕಟ್ಟೆ ಎಂಬಲ್ಲಿ ನಡೆದಿದೆ.

ದಾಮಸ್ ಕಟ್ಟೆ ನಿವಾಸಿ ಜೆಸ್ಲಿಟಾ ಸೆರಾವೋ ( 21) ಎಂಬಾಕೆ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಜೆಸ್ಲಿಟಾ ಸೆರಾವೋ ಮಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ ಡಿಗ್ರಿ ಅಂತಿಮ ವರ್ಷದ ವಿದ್ಯಾಭ್ಯಾಸ ಮಾಡಿಕೊಂಡಿದ್ದು, ಮಂಗಳವಾರ ಕಾಲೇಜಿಗೆ ರಜೆ ಮಾಡಿ ಮನೆಯಲ್ಲಿದ್ದರು. ಬೆಳಗಿನ ಜಾವ ಹೆತ್ತವರು ಪಕ್ಷಿಕೆರೆ ಚರ್ಚ್ಗೆ ಪ್ರಾರ್ಥನೆಗೆ ಹೋದ ಸಮಯದಲ್ಲಿ ಈಕೆ ತನ್ನ ಕೋಣೆಯ ಫ್ಯಾನ್ ಗೆ ಚೂಡಿದಾರ್ ಶಾಲ್‌ನಿಂದ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ.ಮನೆಯವರು ಚರ್ಚ್ನಿಂದ ವಾಪಸ್ ಮನೆಗೆ ಬಂದು ನೋಡಿದಾಗ ಆತ್ಮಹತ್ಯೆ ಪ್ರಕರಣ ಬಯಲಿಗೆ ಬಂದಿದ್ದು, ಮುಲ್ಕಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.


Share with

Leave a Reply

Your email address will not be published. Required fields are marked *