ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿ ಅವರು ಎ.3ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಇಂದು ದೇವಸ್ಥಾನಗಳಿಗೆ ಭೇಟಿ ಕೊಟ್ಟು ದೇವರ ದರ್ಶನ ಪಡೆದರು.
ಬಿಲ್ಲವರ ಎರಡನೇ ಅತಿದೊಡ್ಡ ದೇವಸ್ಥಾನವಾದ ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರಕ್ಕೆ ಭೇಟಿ ನೀಡಿ ವಿಶ್ವನಾಥ ದೇವರು ಮತ್ತು ಪಂಚ ಮಹಾ ಶಕ್ತಿಗಳಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಕ್ಷೇತ್ರ ಆಡಳಿತ ಮಂಡಳಿಯ ಅಧ್ಯಕ್ಷರಾದ ಬಿ .ಎನ್ ಶಂಕರ್ ಪೂಜಾರಿ ಅವರು, ಕೋಟ ಶ್ರೀನಿವಾಸ್ ಪೂಜಾರಿಯವರನ್ನು ಹೂವಿನ ಹಾರ ಹಾಕಿ ಸ್ವಾಗತಿಸಿದರು. ವಿಶ್ವನಾಥ ಕ್ಷೇತ್ರದ ಪ್ರಧಾನ ಅರ್ಚಕರಾದ ಧನರಾಜ್ ಶಾಂತಿ ಪ್ರಸಾದ ನೀಡಿದರು.
ಕಾಪು ಶಾಸಕರಾದ ಸುರೇಶ್ ಶೆಟ್ಟಿ ಗುರ್ಮೆ, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಶಿಲ್ಪಾ ಜಿ ಸುವರ್ಣ, ಗೀತಾಂಜಲಿ ಸುವರ್ಣ, ವೀಣಾ ಶೆಟ್ಟಿ, ಜಿತೇಂದ್ರ ಶೆಟ್ಟಿ ,ಅರುಣ್ ಶೆಟ್ಟಿ ಪಾದೂರು, ಪ್ರಕಾಶ್ ಶೆಟ್ಟಿ ಪಾದ ಬೆಟ್ಟು, ಆಡಳಿತ ಮಂಡಳಿಯ ಪದಾಧಿಕಾರಿಗಳು, ಬಿಲ್ಲವ ಮುಖಂಡರು ಮತ್ತು ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.