ಉಡುಪಿ: ಲೋಕಸಭಾ ಚುನಾವಣೆಯನ್ನು ಬಿಜೆಪಿ ಜೆಡಿಎಸ್ ಮೈತ್ರಿಯ ಮೂಲಕ ಎದುರಿಸಲು ಸನ್ನದ್ಧವಾಗಿರುವ ಸಂದರ್ಭದಲ್ಲಿ ಇದಕ್ಕೆ ಮುನ್ನುಡಿ ಎಂಬಂತೆ ಕಾಪುವಿನ ಜೆಡಿಎಸ್ ಕಚೇರಿಗೆ ಉಡುಪಿ ಚಿಕ್ಕಮಗಳೂರು ಮೈತ್ರಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಮಾ.30ರಂದು ಭೇಟಿ ನೀಡಿದರು.
ಜೆಡಿಎಸ್ ಜಿಲ್ಲಾಧ್ಯಕ್ಷರಾದ ಯೋಗೀಶ್ ಶೆಟ್ಟಿ ಅವರು ಬಿಜೆಪಿ ಪಕ್ಷದ ಪ್ರಮುಖರನ್ನು ಆತ್ಮೀಯವಾಗಿ ಬರಮಾಡಿಕೊಂಡು ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್ ಅವರನ್ನು ಗೌರವಿಸಿದರು.
ಈ ಸಂದರ್ಭ ಜೆಡಿಎಸ್ ಪ್ರಮುಖರು ಈ ಬಾರಿಯ ಚುನಾವಣೆಯನ್ನು ಮೈತ್ರಿಯ ಮೂಲಕ ಎದುರಿಸುವ ಭರವಸೆ ನೀಡಿ, ಪಡುಬಿದ್ರಿ ಚಿಕ್ಕಮಗಳೂರು ರೈಲ್ವೆ ಯೋಜನೆ ಬಗೆಯೂ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯ ಗಮನ ಸೆಳೆದರು.
ಜೆಡಿಎಸ್ ಪ್ರಮುಖರಾದ ವಾಸುದೇವ ರಾವ್, ಗಂಗಾಧರ ಭಿರ್ತಿ, ವೆಂಕಟೇಶ್, ಅಶ್ರಫ್, ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ನವೀನ್ ಶೆಟ್ಟಿ ಕುತ್ಯಾರು, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಪ್ರವೀಣ್ ಕುಮಾರ್, ಸತೀಶ್ ಉದ್ಯಾವರ ಮತ್ತಿತರರು ಉಪಸ್ಥಿತರಿದ್ದರು.