Udupi: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ksrtc ಬಸ್

Share with

ಉಡುಪಿ: ಕೆಎಸ್ಸಾರ್ಟಿಸಿ ಬಸ್ ವೊಂದು ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ ಜು.23ರ ಬುಧವಾರ ಬೆಳಗ್ಗೆ ಮಣಿಪಾಲದ ಲಕ್ಷ್ಮೀಂದ್ರ ನಗರದ ಬಳಿ ನಡೆದಿದೆ.

ಉಡುಪಿಯಿಂದ ಮಣಿಪಾಲಕ್ಕೆ ಆಗಮಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ ಅತೀ ವೇಗದಿಂದ ಆಗಮಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರಣ ಈ ಘಟನೆ ನಡೆದಿದೆ ಎನ್ನಲಾಗಿದೆ.

ಯಾರಿಗೂ ಗಾಯ ಉಂಟಾಗಿಲ್ಲ. ಮಣಿಪಾಲ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಸ್‌ ದಾವಣಗೆರೆಯಿಂದ ಉಡುಪಿಗೆ ಆಗಮಿಸಿ ಅಲ್ಲಿಂದ ಮಣಿಪಾಲಕ್ಕೆ ತೆರಳುತ್ತಿತ್ತು ಎನ್ನಲಾಗಿದೆ.


Share with

Leave a Reply

Your email address will not be published. Required fields are marked *