ಬೆಳ್ತಂಗಡಿ ತಾಲೂಕಿನ ಆಳದಂಗಡಿಯಲ್ಲಿ ಧರ್ಮಸ್ಥಳದಿಂದ ನಾರಾವಿ ಕಡೆಗೆ ಸಂಚರಿಸುವ ಕೆ.ಎಸ್.ಆರ್.ಟಿ.ಸಿ ಬಸ್ ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಸೆ.11ರಂದು ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ವಸಂತ ಬಂಗೇರ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕರಾದ ಕೆ. ಮಂಜುನಾಥ ಭಂಡಾರಿ, ಮುಖಂಡರಾದ ರಕ್ಷಿತ ಶಿವರಾಂ ಭಾಗವಹಿಸಿದ್ದರು.
ಕೆ.ಎಸ್.ಆರ್ .ಟಿ .ಸಿ ಅಧಿಕಾರಿಗಳು ಇನ್ನಿತರ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.