’ಕುಮಾರಸ್ವಾಮಿ ಮನುವಾದಿಯಾಗಿದ್ದಾರೆ..’; ಭಗವದ್ಗೀತೆ ಪಠ್ಯದ ಕುರಿತು ಸಿದ್ದರಾಮಯ್ಯ ಪ್ರತಿಕ್ರಿಯೆ

Share with

ಬೆಂಗಳೂರು: ಶಾಲಾ- ಕಾಲೇಜು ಹಾಗೂ ವಿವಿ ಮಟ್ಟದಲ್ಲಿ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಬೋಧನೆ ಮಾಡುವ ಬಗ್ಗೆ ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜತೆ ಚರ್ಚೆ ನಡೆಸುವುದಾಗಿ ಹೇಳಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನುವಾದಿ ಎಂದು ಕರೆದಿದ್ದಾರೆ.

ಶನಿವಾರ ಡಾ.ಬಿ. ಆರ್ ಅಂಬೇಡ್ಕರ್ ಅವರ 69ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ವಿಧಾನಸೌಧ ಆವರಣದಲ್ಲಿರುವ ಬಾಬಾ ಸಾಹೇಬರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದ ನಂತರ ಸುದ್ದಿಗಾರ ಪ್ರಶ್ನೆಗಳಿಗೆ ಉತ್ತರಿಸಿದ ಸಿಎಂ ‘ಚುನಾವಣೆಗಾಗಿ ಕುಮಾರಸ್ವಾಮಿ ಬಿಜೆಪಿಯೊಂದಿಗೆ ಕೈಜೋಡಿಸಿದ ನಂತರ, ಅವರು ಮನುವಾದಿಯಾಗಿದ್ದಾರೆ’ ಎಂದರು.

ಅಂಬೇಡ್ಕ‌ರ್ ಅವರನ್ನು ಸ್ಮರಿಸಿದ ಸಿಎಂ ”ಹಿಂದೂ ಧರ್ಮದಲ್ಲಿನ ಸಾಮಾಜಿಕ ಮತ್ತು ಜಾತಿ ವ್ಯವಸ್ಥೆಯಿಂದ ಬೇಸತ್ತು ಅದನ್ನು ಸುಧಾರಿಸಲು ಸಾಧ್ಯವಾಗದೆ ಅಂಬೇಡ್ಕ‌ರ್ ಬೌದ್ಧ ಧರ್ಮವನ್ನು ಸ್ವೀಕರಿಸಿದರು ಎಂದರು.

“ಅಂಬೇಡ್ಕ‌ರ್ ತಮ್ಮ ಜೀವನದ ಕೊನೆಯ ದಿನಗಳಲ್ಲಿ ಹಿಂದೂ ಧರ್ಮವನ್ನು ತೊರೆದು ಬೌದ್ಧ ಧರ್ಮವನ್ನು ಸೇರಿದರು. ಅವರು ಹಿಂದೂ ಧರ್ಮದಲ್ಲಿ ಜನಿಸಿದರು, ಆದರೆ ಹಿಂದೂ ಧರ್ಮದಲ್ಲಿ ಸಾಯಲು ಸಾಧ್ಯವಿಲ್ಲ, ಏಕೆಂದರೆ ಅವರು ಹಲವಾರು ಪ್ರಯತ್ನಗಳ ನಂತರವೂ ಹಿಂದೂ ಧರ್ಮವನ್ನು ಸುಧಾರಿಸಲು ಸಾಧ್ಯವಾಗಲಿಲ್ಲ, ಆದ್ದರಿಂದ ಅವರು ಬೌದ್ಧ ಧರ್ಮವನ್ನು ಸ್ವೀಕರಿಸಿದರು” ಎಂದರು.


Share with

Leave a Reply

Your email address will not be published. Required fields are marked *