ಉಡುಪಿ: ಕುಂದಾಪುರ ತಾಲೂಕಿನ ತಲ್ಲೂರು ಸಮೀಪದ ಹೇರಿಕುದ್ರು ಬಿಡ್ಜ್ ಬಳಿ ಫೆ.26ರಂದು ಬೆಳಿಗ್ಗೆ ಬೈಕೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು ಸವಾರನೋರ್ವ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ಬೈಂದೂರು ಸಮೀಪದ ನಾಗೂರು ಮೂಲದ, ಪ್ರಸ್ತುತ ಕುಂದಾಪುರದ ನಿವಾಸಿ ಮೊಹಮ್ಮದ್ ಫರ್ವೇಜ್(37) ಎಂದು ಗುರುತಿಸಲಾಗಿದೆ. ಇವರು ಬೈಕಿನಲ್ಲಿ ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿದ ಬೈಕ್ ರಸ್ತೆ ಮಧ್ಯೆ ಇರುವ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಇವರು ಪತ್ನಿ, ಓರ್ವ ಪುತ್ರಿಯನ್ನು ಅಗಲಿದ್ದಾರೆ. ಈ ಬಗ್ಗೆ ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.