ಬಾಣಂತಿಯರು, ಮಕ್ಕಳು, ವಯಸ್ಸಾದವರು, ರೋಗಿಗಳು ಮಾಸ್ಕ್ ಧರಿಸಬೇಕು: ದಿನೇಶ್

Share with

ಬೆಂಗಳೂರು, ಮೇ 26: ಕೊರೊನಾ (Covid) ತಪಾಸಣೆ ವಿಚಾರದಲ್ಲಿ ಹಳೆಯ ಪದ್ಧತಿಯನ್ನು ಅನುಸರಿಸುತ್ತೇವೆ. ಅಗತ್ಯವಿರುವ ಎಲ್ಲ ಕ್ರಮಗಳನ್ನ ನಾವು ತೆಗೆದುಕೊಳ್ಳುತ್ತೇವೆ. ಎಲ್ಲರಿಗೂ ಕೋವಿಡ್ ಟೆಸ್ಟ್‌ ಮಾಡುವುದಿಲ್ಲ. ಸೋಂಕಿನ ಲಕ್ಷಣ ಇರುವವರಿಗೆ ಮಾತ್ರ ಟೆಸ್ಟ್ ಮಾಡುತ್ತೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu rao) ಹೇಳಿದರು. ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸೋಮವಾರ ಸಭೆ ನಡೆಸಿದರು.


ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಕೇಂದ್ರದಿಂದ ಮಾರ್ಗಸೂಚಿ ಬಂದ ಬಳಿಕ ಲಸಿಕೆ ನೀಡಿಲು ಆರಂಭಿಸುತ್ತೇವೆ. ಕೊರೊನಾ ಸೋಂಕು ಲಕ್ಷಣ ಇರುವ ಮಕ್ಕಳಿಗೆ ಆಯಾ ಶಾಲೆಯ ಆಡಳಿತ ಮಂಡಳಿ ರಜೆ ನೀಡಬೇಕು. ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ರಜೆ ತೆಗೆದುಕೊಳ್ಳದಂತೆ ಸೂಚನೆ ನೀಡಿದ್ದೇವೆ ಎಂದು ತಿಳಿಸಿದ್ದಾರೆ.

ವಿದೇಶದಿಂದ ಬಂದವರಿಗೆ ಯಾವುದೇ ಟೆಸ್ಟಿಂಗ್ ಮಾಡಲ್ಲ. ಕೋವಿಡ್ ನಿಯಂತ್ರಣಕ್ಕೆ ನಾವು ತಯಾರಾಗಿದ್ದೇವೆ. ಬಾಣಂತಿಯರು, ಮಕ್ಕಳು, 50 ವರ್ಷ ಮೇಲ್ಪಟ್ಟವರು ಮತ್ತು ವಿವಿಧ ಕಾಯಿಲೆಗಳಿಂದ ಬಳಲುತ್ತಿರುವವರು ಮಾಸ್ಕ್ ಧರಿಸಬೇಕು ಎಂದು ಸೂಚನೆ ನೀಡಿದರು.

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ. ಗರ್ಭಿಣಿಯರು ಮಾಸ್ಕ್ ಧರಿಸಬೇಕು. ವಯಸ್ಸಾದವರು ಜನಸಂದಣಿ ಇರುವ ಸ್ಥಳಗಳಿಗೆ ತೆರಳಬಾರದು. ರೋಗಲಕ್ಷಣ ಕಂಡುಬಂದರೆ ಕೂಡಲೇ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಬೇಕು. ಕೋವಿಡ್ ಬಗ್ಗೆ ಜನರು ಯಾವುದೇ ಆತಂಕಪಡುವ ಅಗತ್ಯವಿಲ್ಲ. ಕೋವಿಡ್ ಪ್ರಕರಣಗಳು ಹೆಚ್ಚಾದರೆ ಕ್ರಮ ತೆಗೆದುಕೊಳ್ಳುತ್ತೇವೆ. ಸದ್ಯಕ್ಕೆ ಯಾವುದೇ ಸೀರಿಯಸ್ ಇಲ್ಲ ಎಂದು ಸಚಿವ ಶರಣಪ್ರಕಾಶ್ ಹೇಳಿದರು.



Tv9Tamilnews.com Assamtv9.com Malayalamtv9.com News9live.com Trends9.com Money9live.com
Copyright © 2025 TV9Kannada. All Rights Reserved.


Share with

Leave a Reply

Your email address will not be published. Required fields are marked *