
ಸಿಕ್ಕಿಂನ ಚಾಟೆನ್ ಪ್ರದೇಶದಲ್ಲಿದ್ದ ಸೇನಾ ಶಿಬಿರದಲ್ಲಿ ಭೂಕುಸಿತ ಸಂಭವಿಸಿದೆ. ಪರಿಣಾಮ ಮೂವರು ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದು, 6 ಮಂದಿ ಕಾಣೆಯಾಗಿದ್ದಾರೆ. ಭಾರೀ ಮಳೆಯಿಂದಾಗಿ ಈ ದುರಂತ ಸಂಭವಿಸಿದೆ ಎಂದು ರಕ್ಷಣಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೂರು ಶವಗಳನ್ನು ವಶಪಡಿಸಿಕೊಳ್ಳಲಾಗಿದ್ದು, ನಾಲ್ವರನ್ನು ಸಣ್ಣಪುಟ್ಟ ಗಾಯಗಳೊಂದಿಗೆ ರಕ್ಷಿಸಲಾಗಿದೆ. ಕಾಣೆಯಾಗಿರುವ 6 ಸಿಬ್ಬಂದಿಗಳನ್ನು ಪತ್ತೆ ಹಚ್ಚುವ ಕಾರ್ಯಚರಣೆ ನಡೆಯುತ್ತಿದೆ ಎಂದು ರಕ್ಷಣಾ ಅಧಿಕಾರಿ ತಿಳಿಸಿದ್ದಾರೆ.