
ಅವಧಿಗೂ ಮುನ್ನ ರಾಜ್ಯದಲ್ಲಿ ಮುಂಗಾರು ಮಳೆ ಶುರುವಾಗಿದ್ದು, ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಕರಾವಳಿ ಜಿಲ್ಲೆಗಳಲ್ಲಿ ಸಾಲು ಅವಾಂತರಗಳು ಸೃಷ್ಟಿಯಾಗಿವೆ.

ಇದೀಗ ಸಕಲೇಶಪುರ ತಾಲೂಕಿನ ದೋಣಿಗಾಲ್ & ಅಡ್ಡನಗುಡ್ಡದ ಬಳಿ ಶಿರಾಡಿ ಘಾಟ್ ರಸ್ತೆಯಲ್ಲಿ 2 ಕಡೆ ಭೂ ಕುಸಿತ ಉಂಟಾಗಿದೆ.
ಬೆಂಗಳೂರು-ಮಂಗಳೂರು ಸಂಪರ್ಕ ಕಲ್ಪಿಸುವ NH 75 ರಸ್ತೆಯಲ್ಲಿ ಮಣ್ಣು ಕುಸಿಯುತ್ತಿರುವುದರಿಂದ ವಾಹನ ಸವಾರರಲ್ಲಿ ಆತಂಕ ಶುರುವಾಗಿದೆ.




