ಆಸ್ಕರ್ ಅವಾರ್ಡ್ಗೆ ಭಾರತದಿಂದ ಅಧಿಕೃತವಾಗಿ ಆಯ್ಕೆ ಆದ ‘ಲಾಪತಾ ಲೇಡಿಸ್’

Share with

ಲಾಪತಾ ಲೇಡಿಸ್ ಸಿನಿಮಾ ‘ಆಸ್ಕರ್ 2025’ಗೆ ಭಾರತದಿಂದ ಅಧಿಕೃತವಾಗಿ ಆಯ್ಕೆ ಆಗಿದೆ. ಕಿರಣ್ ರಾವ್ ನಿರ್ದೇಶನದ ಈ ಚಿತ್ರವನ್ನು ಆಮಿರ್ ಖಾನ್ ಅವರು ನಿರ್ಮಾಣ ಮಾಡಿದ್ದಾರೆ. ಈ ವರ್ಷದ ಆರಂಭದಲ್ಲಿ ರಿಲೀಸ್ ಆದ ಈ ಚಿತ್ರ ಎಲ್ಲರಿಂದ ಮೆಚ್ಚುಗೆ ಪಡೆಯಿತು. ಒಟಿಟಿಯಲ್ಲಿ ರಿಲೀಸ್ ಆದ ಬಳಿಕ ಮತ್ತೊಂದಷ್ಟು ಮಂದಿ ಈ ಚಿತ್ರವನ್ನು ನೋಡಿ ಮೆಚ್ಚಿಕೊಂಡಿದ್ದಾರೆ.

ಲಾಪತಾ ಲೇಡಿಸ್’ ಸಿನಿಮಾ ಮಹಿಳೆಯರ ಸಬಲೀಕರಣದ ಬಗ್ಗೆ ಇದೆ. ಈ ಸಿನಿಮಾದಲ್ಲಿ ನಿಶಾಂಶಿ ಗೋಯಲ್, ಪ್ರತಿಭಾ ರಾಂತಾ, ಸ್ಪರ್ಶ್ ಶ್ರೀವಾಸ್ತವ, ಚಾಯಾ ಕದಮ್, ರವಿ ಕಿಶನ್ ನಟಿಸಿದ್ದಾರೆ. ‘ಲಾಪತಾ ಲೇಡಿಸ್’ ಸಿನಿಮಾ ಆಸ್ಕರ್ ಗೆಲ್ಲಬೇಕು ಎಂಬುದು ಕಿರಣ್ ರಾವ್ ಅವರ ಕನಸಾಗಿದೆ. ಈ ಕನಸಿನ ಒಂದು ಹಂತವನ್ನು ಅವರು ಏರಿದ್ದಾರೆ.

‘ಲಾಪತಾ ಲೇಡಿಸ್’ ‘ಅತ್ಯುತ್ತಮ ವಿದೇಶಿ ಸಿನಿಮಾ’ ವಿಭಾಗದಲ್ಲಿ ನಾಮ ನಿರ್ದೇಶನಗೊಂಡಿದೆ. ಚೆನ್ನೈನ್ನಲ್ಲಿ ‘ಭಾರತ ಫಿಲ್ಮ್ ಫೆಡರೇಷನ್’ ಸದಸ್ಯರು ಈ ಘೋಷಣೆ ಮಾಡಿದ್ದಾರೆ. ಈಗ ನಡೆಯಲಿರುವುದು 97ನೇ ಸಾಲಿನ ಅಕಾಡೆಮಿ ಅವಾರ್ಡ್ಸ್ ಆಗಿದೆ.


Share with

Leave a Reply

Your email address will not be published. Required fields are marked *