ಬೆಂಗಳೂರು: ಕಾಂಗ್ರೆಸ್ ಸರ್ಕಾರದ 4ನೇ ಗ್ಯಾರಂಟಿ ಯೋಜನೆ ಗೃಹ ಲಕ್ಷ್ಮೀಗೆ ಚಾಲನೆ ದೊರಕಿದೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ್ ಖರ್ಗೆ ಯೋಜನೆಗೆ ಚಾಲನೆ ನೀಡಿದರು.
ಇದರೊಂದಿಗೆ ರಾಜ್ಯದ 1.11 ಕೋಟಿ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಜಮೆ ಆಗಿದೆ. ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಸೇರಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಲ್ಕರ್ ಉಪಸ್ಥಿತರಿದ್ದರು.