ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ವಿಧಾನಸೌಧದ ಆವರಣದಲ್ಲಿ ಜು.12ರಂದು ಬಿಜೆಪಿ ಪ್ರತಿಭಟನೆ ನಡೆಸಿತು.
ಬಿಜೆಪಿಯ ಮುಖಂಡರು ಸೇರಿದಂತೆ ಹಲವಾರು ಶಾಸಕರು ವಿಧಾನಸೌಧ ಆವರಣದಲ್ಲಿರುವ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಬಿಜೆಪಿ ಮುಖಂಡರು ಸಮರ್ಪಕ ಆಡಳಿತ ನಡೆಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು. ಬಳಿಕ ಮೆರವಣಿಗೆಯಲ್ಲಿ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.